ಹುಬ್ಬಳ್ಳಿಯಲ್ಲಿ ಕಾಂಗ್ರೆಸ್​ ಕಾರ್ಯಕರ್ತರ ವಿಜಯೋತ್ಸವ

ಹುಬ್ಬಳ್ಳಿ: ಪಂಚರಾಜ್ಯಗಳ ಚುನಾವಣೆಯಲ್ಲಿ ಮೂರು ರಾಜ್ಯಗಳಲ್ಲಿ ತಮ್ಮ ಪಕ್ಷ ಉತ್ತಮ ಸಾಧನೆ ತೋರಿರುವ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್​ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ರಾಜಸ್ಥಾನ, ಛತ್ತೀಸ್​ಗಢದಲ್ಲಿ ಬಹುಮತ ಪಡೆದು ಮಧ್ಯಪ್ರದೇಶ ರಾಜ್ಯದಲ್ಲಿ ಕಾಂಗ್ರೆಸ್​ ಪಕ್ಷ ಮುನ್ನಡೆಗಳಿಸಿದ ಕಾರಣ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಕಾರ್ಯಕರ್ತರು ರಾಹುಲ್​ ಗಾಂಧಿ ಹಾಗೂ ಪಕ್ಷದ ಪರ ಘೋಷಣೆ ಕೂಗಿ ಸಂಭ್ರಮ ಆಚರಣೆ ಮಾಡಿದರು.
ಜಿಲ್ಲಾಧ್ಯಕ್ಷ ಅಲ್ತಾಫ್​ ಹಳ್ಳೂರ್​ ಹಾಗೂ ಅನಿಲ್​ ಕುಮಾರ್​ ನೇತೃತ್ವದಲ್ಲಿ ನಡೆದ ವಿಜಯೋತ್ಸವದಲ್ಲಿ ಮಹಿಳಾ ಕಾರ್ಯಕರ್ತರೂ ಸೇರಿ ಎಲ್ಲರೂ ಕುಣಿದು ಕುಪ್ಪಳಿಸಿದರು.