ಉಪಚುನಾವಣೆಯಲ್ಲಿ ಗೆಲುವು ನಮ್ಮದೆ

ಬೆಳಗಾವಿ: ಉಪಚುನಾವಣೆ ನಡೆಯಲಿರುವ ಐದು ಕ್ಷೇತ್ರಗಳಲ್ಲಿ ಗೆಲುವು ನಮ್ಮದೆ. ಇದರಲ್ಲಿ ಎರಡು ಮಾತಿಲ್ಲ ಎಂದು ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಹೇಳಿದ್ದಾರೆ.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಲೋಕಸಭೆ ಚುನಾವಣೆಗೆ ಈ ಉಪಚುನಾವಣೆ ದಿಕ್ಸೂಚಿ ಅಲ್ಲ. ಸಮ್ಮಿಶ್ರ ಸರ್ಕಾರಕ್ಕೆ ಈ ಉಪ ಚುನಾವಣೆ ಶಕ್ತಿ ತುಂಬಲಿದೆ ಎಂದರು.

ಬಹಿರಂಗ ಹೇಳಿಕೆ ನೀಡದಂತೆ ಸೂಚನೆ: ಸಚಿವ ರಮೇಶ್ ಜಾರಕಿಹೊಳಿ ಹಾಗೂ ಡಿ.ಕೆ.ಶಿವಕುಮಾರ್ ಇಬ್ಬರೂ ಫ್ರೆಂಡ್ಸ್. ರಾಜಕೀಯ ಬೆಳವಣಿಗೆಗಳ ಬಗ್ಗೆ ಇವರು ಮಾತನಾಡುವುದು ಸಹಜ. ಬಹಿರಂಗವಾಗಿ ಏನೂ ಮಾತನಾಡದಂತೆ ಸೂಚಿಸುತ್ತೇನೆ ಎಂದು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಪರಮೇಶ್ವರ್ ಉತ್ತರಿಸಿದರು.

ಎಂಇಎಸ್ ಬೆಳಗಾವಿ ಮಹಾನಗರದಲ್ಲಿ ಕರಾಳ ದಿನ ಆಚರಣೆ ಮಾಡುತ್ತಿರುವುದು ಇದೇ ಮೊದಲಲ್ಲ. ನಾಡಿಗೆ ದ್ರೋಹ ಬಗೆಯುವವರ ವಿರುದ್ಧ ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

ಮಣಿಪುರದಲ್ಲಿ 20 ಯೋಧರ ಪ್ರಾಣ ಉಳಿಸಿ, ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಗೋಕಾಕ ಮೂಲದ ಯೋಧ ಉಮೇಶ ಹೆಳವರ ಧೈರ್ಯ ಹಾಗೂ ಸಾಹಸ ಮೆಚ್ಚುವಂಥದ್ದು. ಸಿಎಂ ಜತೆ ಚರ್ಚಿಸಿ ಯೋಧನ ಕುಟುಂಬಕ್ಕೆ ಎಲ್ಲ ನೆರವು ಒದಗಿಸಲು ಸರ್ಕಾರ ಸಿದ್ಧವಿದೆ.

| ಜಿ. ಪರಮೇಶ್ವರ್, ಉಪಮುಖ್ಯಮಂತ್ರಿ

Leave a Reply

Your email address will not be published. Required fields are marked *