More

    ಸುಭದ್ರ ಪ್ರಜಾಪ್ರಭುತ್ವಕ್ಕಾಗಿ ಚುನಾವಣಾ ಸಾಕ್ಷರತೆ ಅಗತ್ಯ

    ಯಳಂದೂರು : 18 ವರ್ಷ ತುಂಬಿರುವ ಪ್ರತಿಯೊಬ್ಬರೂ ಮತದಾನದ ಪ್ರಕ್ರಿಯೆಲ್ಲಿ ಪಾಲ್ಗೊಂಡು ಸುಭದ್ರ ಸಮಾಜ ನಿರ್ಮಾಣ ಮಾಡಲು ಮುಂದಾಗಬೇಕು ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಹೇಶ್ ಕುಮಾರ್ ತಿಳಿಸಿದರು.

    ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಟ್ಟಣ ಪಂಚಾಯಿತಿ ಸ್ವೀಪ್ ವತಿಯಿಂದ ಇತ್ತೀಚೆಗೆ ‘ಚುನಾವಣಾ ಪರ್ವ ದೇಶದ ಗರ್ವ’ ಲೋಕಸಭಾ ಚುನಾವಣೆ 2024ರ ಮತದಾನದ ಅರಿವು ಮತ್ತು ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು. ಈ ಬಾರಿ ಏಪ್ರಿಲ್ 26 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ಮತದಾನ ಮಾಡುವ ಮೂಲಕ ನಿರ್ಭೀತಿ, ನಿರಾತಂಕವಾಗಿ ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೆ ಮತದಾನ ಮಾಡಬೇಕು. ಸುಭದ್ರ ಪ್ರಜಾಪ್ರಭುತ್ವಕ್ಕಾಗಿ ಚುನಾವಣಾ ಸಾಕ್ಷರತೆ ಅಗತ್ಯವಾಗಿದ್ದು, ಯುವ ಜನರು ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು ಕರೆ ನೀಡಿದರು.

    ಪಟ್ಟಣದ ಎಸ್‌ಬಿಐ ವೃತ್ತ, ಗಾಂಧಿ ವೃತ್ತ, ಬಸ್‌ನಿಲ್ದಾಣ, ದೊಡ್ಡ ಅಂಗಡಿ ಬೀದಿ, ಕೆ.ಕೆ.ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಮತದಾನದ ಬಗ್ಗೆ ಅರಿವು ಮೂಡಿಸಿದರು. ಪಂಚಾಯಿತಿ ಸಿಬ್ಬಂದಿ ಪರಶಿವಮೂರ್ತಿ, ಮಲ್ಲಿಕಾರ್ಜುನ, ರಘು, ಲಕ್ಷ್ಮೀ, ಜಯಲಕ್ಷ್ಮೀ ಸೇರಿದಂತೆ ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts