11ರಿಂದ 13ರವರೆಗೆ ವಿದ್ಯುತ್ ಕಂಬ ಹತ್ತುವ ತರಬೇತಿ

training-logo-png-transparent
Published on

ಕುಂದಾಪುರ: ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸುವ ಸಲುವಾಗಿ ಮೆಸ್ಕಾಂ ಕುಂದಾಪುರ ವಿಭಾಗ ವತಿಯಿಂದ ವಿದ್ಯುತ್ ಕಂಬ ಹತ್ತಿ ಇಳಿಯುವ ಉಚಿತ ತರಬೇತಿ ಕುಂದಾಪುರದ ಗಾಂಧಿ ಮೈದಾನದಲ್ಲಿ ನ.11ರಿಂದ 13ರವರೆಗೆ ನಡೆಯಲಿದೆ. ಎಸ್ಸೆಸ್ಸೆಲ್ಸಿ ತೇರ್ಗಡೆಯಾದ ಅಭ್ಯರ್ಥಿಗಳು ಗುರುತಿನ ಚೀಟಿ ಜತೆಗೆ(ಆಧಾರ್ ಕಾರ್ಡ್) ಕುಂದಾಪುರದ ಗಾಂಧಿ ಮೈದಾನದಲ್ಲಿ ಹಾಜರಾಗಬೇಕಿದ್ದು, ತರಬೇತಿಯು ಬೆಳಗ್ಗೆ 9.30ರಿಂದ ಮಧ್ಯಾಹ್ನ 12.30ರವರೆಗೆ ನಡೆಯಲಿದೆ. ಅಭ್ಯರ್ಥಿಯ ನೇಮಕಾತಿ ಅಂಕ ಮತ್ತು ದೈಹಿಕ ಸಾಮರ್ಥ್ಯದ ಮೇಲೆ ಅವಲಂಬಿತವಾಗಿದೆ ಎಂದು ಮೆಸ್ಕಾಂ ಕುಂದಾಪುರ ಕಾರ್ಯನಿರ್ವಾಹಕ ಇಂಜಿನಿಯರ್ ಯಶವಂತ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net