More

    ಆಲ್ದೂರಿನಲ್ಲಿ ಮಳೆ-ಗಾಳಿಗೆ ಧರೆಗುರುಳಿದ ವಿದ್ಯುತ್ ಕಂಬಗಳು

    ಆಲ್ದೂರು: ಪಟ್ಟಣದಲ್ಲಿ ಮಂಗಳವಾರ ಮಧ್ಯಾಹ್ನ ಗುಡುಗು, ಮಿಂಚು ಸಹಿತ ಉತ್ತಮ ಮಳೆಯಾಗಿದೆ. ಕಳೆದ 15 ದಿನಗಳಿಂದ ಬಿಸಿಲ ಝಳಕ್ಕೆ ತತ್ತರಿಸಿದ್ದ ಜನತೆಗೆ ಮಳೆರಾಯ ತಂಪೆರಗಿದ್ದಾನೆ.

    ಕಳೆದ ತಿಂಗಳು ಉತ್ತಮ ಮಳೆಯಾಗಿದ್ದ ಪರಿಣಾಮ ಕಾಫಿ ಗಿಡಗಳಲ್ಲಿ ಹೂ ಅರಳಿದ್ದವು. ಇದೀಗ ಕಾಫಿಗೆ ಮಳೆಯ ಅವಶ್ಯಕತೆ ಇತ್ತು. ಮಂಗಳವಾರ ಸುರಿದ ಮಳೆಯಿಂದ ಕಾಫಿ ತೋಟಕ್ಕೆ ಅನುಕೂಲವಾಗಿದೆ. ಇನ್ನು ಮಳೆಯ ಜತೆ ರಭಸವಾಗಿ ಬೀಸಿದ ಗಾಳಿಯಿಂದಾಗಿ ಹಲವೆಡೆ ವಿದ್ಯುತ್ ಕಂಬಗಳು ಧರೆಗೆ ಉರುಳಿದ್ದು, ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿತ್ತು. ಆಲ್ದೂರು-ಚಿಕ್ಕಮಗಳೂರು ರಸ್ತೆಯಲ್ಲಿ ಮರಗಳು ನೆಲಕ್ಕುರುಳಿದ ಪರಿಣಾಮ ಸಂಚಾರಕ್ಕೆ ಅಡ್ಡಿ ಉಂಟಾಗಿತ್ತು. ಕೆಲ ಸಮಯದ ಬಳಿಕ ಮರಗಳನ್ನು ತೆರವು ಮಾಡಿದ ಬಳಿಕ ವಾಹನ ಓಡಾಟಕ್ಕೆ ಅನುಕೂಲ ಮಾಡಿಕೊಡಲಾಯಿತು.

    ಬಾಳೆಹೊನ್ನೂರಲ್ಲಿ ತಂಪೆರೆದ ಮಳೆರಾಯ: ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಂಗಳವಾರ ಸಾಧಾರಣ ಪ್ರಮಾಣದ ಮಳೆಯಾಗಿದೆ. ಮಧ್ಯಾಹ್ನ ಮೂರು ಗಂಟೆ ವೇಳೆಗೆ ಗುಡುಗು ಸಹಿತ ಆರಂಭಗೊಂಡ ಮಳೆ ಸಾಧಾರಣ ಪ್ರಮಾಣದಲ್ಲಿ ಸುರಿಯಿತು. ಬಿಸಿಲಿನ ಬೇಗೆಯಿಂದ ಬಳಲಿದ್ದ ಜನರಿಗೆ ಮಳೆ ತಂಪೆರೆಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts