ಗದಗ: ಲಂಚ ಪಡೆಯುತ್ತಿದ್ದ ವಿದ್ಯುತ್ ಗುತ್ತಿಗೆದಾರನ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮುಂಡರಗಿ ಪಟ್ಟಣದ ಹೆಸ್ಕಾಂ ಕಚೇರಿಯಲ್ಲಿ ವಿದ್ಯುತ್ ಗುತ್ತಿಗೆದಾರ ಹನುಮಂತಪ್ಪ ಹೊನ್ನಳ್ಳಿ ಲಕ್ಷ್ಮವ್ವ ಪೂಜಾರ ಎಂಬುವರಿಂದ 7 ಸಾವಿರ ರೂ.ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಹೈತಾಪುರ ಗ್ರಾಮದ ಲಕ್ಷ್ಮವ್ವ ಅವರ ಆಶ್ರಯ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡಲು ಗುತ್ತಿಗೆದಾರ 12 ಸಾವಿರ ರೂಪಾಯಿ ಬೇಡಿಕೆ ಇಟ್ಟಿದ್ದ. ಈ ಬಗ್ಗೆ ಲಕ್ಷ್ಮವ್ವ ಸಂಬಂಧಿ ಮುತ್ತಪ್ಪ ಹಿರೇಹಾಳ ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದರು. ದೂರಿನ ಅನ್ವಯ ಡಿವೈಎಸ್ಪಿ ವಾಸುದೇವ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು.