

ಬೆಂಗಳೂರು: ತಾವು ಅಧಿಕಾರಕ್ಕೆ ಬಂದರೆ ಉಚಿತ ವಿದ್ಯುತ್ ನೀಡಲಾಗುವುದು ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತ ಯಾಚನೆ ವೇಳೆ ಕಾಂಗ್ರೆಸ್ ಆಶ್ವಾಸನೆ ನೀಡಿತ್ತು. ಯಾವ ಪಕ್ಷ ಅಧಿಕಾರಕ್ಕೆ ಬರಲಿದೆ ಎಂಬ ಅಸಲಿಯತ್ತು ನಾಳೆ ಬಹಿರಂಗಗೊಳ್ಳಲಿದೆ.
ಆದರೆ ಅದಕ್ಕೂ ಮುನ್ನವೇ ಮತದಾರರಿಗೆ ಕರೆಂಟ್ ಶಾಕ್ ಕೊಡಲಾಗಿದೆ. ಅರ್ಥಾತ್, ಚುನಾವಣೆ ಮುಗಿದ ಬೆನ್ನಿಗೇ ವಿದ್ಯುತ್ ದರ ಏರಿಕೆ ನಿರ್ಧಾರವನ್ನು ಘೋಷಣೆ ಮಾಡಲಾಗಿದೆ. ಈ ಕುರಿತ ಮಾಹಿತಿಯನ್ನು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್ಸಿ) ಪ್ರಕಟಿಸಿದೆ.
ಪ್ರತಿ ಯುನಿಟ್ಗೆ 146 ಪೈಸೆ ಹೆಚ್ಚಿಸುವ ಕುರಿತಂತೆ ಎಲ್ಲ ಎಸ್ಕಾಮ್ಗಳು ಅನುಮತಿ ಕೇಳಿದ್ದವು. ಆದರೆ ಪ್ರತಿ ಯುನಿಟ್ಗೆ 70 ಪೈಸೆ ಬೆಲೆ ಏರಿಕೆ ಮಾಡಲು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಅನುಮತಿ ನೀಡಿದೆ. ಈ ಹೊಸ ದರವು ಏಪ್ರಿಲ್ 1ರಿಂದಲೇ ಪೂರ್ವಾನ್ವಯ ಆಗುವಂತೆ ಜಾರಿಗೆ ಬರಲಿದೆ.