More

    ವಿದ್ಯುತ್ ಕ್ಷೇತ್ರದ ಖಾಸಗೀಕರಣ ಸಲ್ಲ

    ಮಾನ್ವಿ: ಕೇಂದ್ರ ಸರ್ಕಾರ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣಗೊಳಿಸಲು ವಿದ್ಯುತ್ ಕಾಯ್ದೆ ತಿದ್ದುಪಡಿ ಮಾಡಲು ಮುಂದಾಗಿರುವುದನ್ನು ಖಂಡಿಸಿ ಜೆಸ್ಕಾಂ ಕಚೇರಿ ಮುಂದೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಮತ್ತು ಅಧಿಕಾರಿಗಳ ಅಸೋಸಿಯೇಷನ್ ಸ್ಥಳೀಯ ಘಟಕದಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.

    ಅಸೋಸಿಯೇಷನ್ ಸ್ಥಳೀಯ ಘಟಕದ ಅಧ್ಯಕ್ಷ ಗುರುರಾಜ ದೊರೆ ಮಾತನಾಡಿ, ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಮೂಲಕ ವಿದ್ಯುತ್ ಕ್ಷೇತ್ರಕ್ಕೆ ತಿದ್ದುಪಡಿ ತಂದು ಖಾಸಗೀಕರಣ ಮಾಡಲು ಹೊರಟಿರುವುದು ತೀವ್ರ ಖಂಡನೀಯ. ಕೇಂದ್ರ ಸರ್ಕಾರ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡುವುದರಿಂದ ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಸೇರಿ ಇನ್ನಿತರ ಸೌಲಭ್ಯಗಳನ್ನು ಪಡೆಯುವ ಬಡ ಜನರು ಸಂಕಷ್ಟಕ್ಕೆ ಗುರಿಯಾಗಬೇಕಾಗುತ್ತದೆ. ಆದ್ದರಿಂದ ಸರ್ಕಾರ ತನ್ನ ನಿರ್ಧಾರವನ್ನು ಹಿಂಪಡೆಯಬೇಕೆಂದು ಆಗ್ರಹಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts