More

    ಸಮರ್ಪಕ ವಿದ್ಯುತ್ ಪೂರೈಕೆ ಸೇರಿ ವಿವಿಧ ಬೇಡಿಕೆ ಈಡೇರಿಸಲು ಆಗ್ರಹ; ಸಂತೋಷಕುಮಾರ ನೇತೃತ್ವದಲ್ಲಿ ಪ್ರತಿಭಟನೆ

    ರಾಣೆಬೆನ್ನೂರ: ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆ ಸೇರಿ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಸಂತೋಷಕುಮಾರ ಪಾಟೀಲ ನೇತೃತ್ವದ ನವಯುಗ ಸಂಘಟನೆ ವತಿಯಿಂದ ಸೋಮವಾರ ನಗರದಲ್ಲಿ ರೈತರು ಬಾರಕೋಲ ಚಳವಳಿ ನಡೆಸಿದರು.
    ನಗರದ ಕೆಇಬಿ ವಿನಾಯಕ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ರೈತರು ಹಳೆ ಪಿ.ಬಿ. ರಸ್ತೆ ಮೂಲಕ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮಿನಿವಿಧಾನಸೌಧ ಎದುರು ಚಳವಳಿ ನಡೆಸಿದರು.
    ನೇತೃತ್ವದ ವಹಿಸಿದ್ದ ಜಿ.ಪಂ. ಮಾಜಿ ಸದಸ್ಯ ಸಂತೋಷಕುಮಾರ ಪಾಟೀಲ ಮಾತನಾಡಿ, ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಿದೆ. ತಾಲೂಕಿನಲ್ಲಿ ಕೆಲವರು ನೀರಾವರಿ ಮಾಡಿಕೊಂಡು ಕೃಷಿ ಮಾಡುತ್ತಿದ್ದಾರೆ. ಆದರೆ, ಹಗಲು ವೇಳೆ ಹೆಸ್ಕಾಂ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡದೆ ಇರುವುದರಿಂದ ರೈತಾಪಿ ವರ್ಗದ ಜನ ದಿಕ್ಕು ತೋಚದಂತಾಗಿದ್ದಾರೆ. ಆದ್ದರಿಂದ ಕೂಡಲೇ ನಿತ್ಯವೂ ಹಗಲಿನಲ್ಲಿ 8 ಗಂಟೆ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿದರು.
    ತಾಲೂಕಿನಲ್ಲಿ ವಾಡಿಕೆಗಿಂತ ಶೇ. 40ರಷ್ಟು ಮಳೆ ಕೊರತೆಯಾಗಿದ್ದು, ಮುಂಗಾರು ಬೆಳೆ ಸಂಪೂರ್ಣ ವಿಫಲವಾಗಿದೆ. ರೈತರು ಸಾಲ ಸೂಲ ಮಾಡಿ ಬಿತ್ತನೆ ಮಾಡಿದ್ದು, ಸಂಪೂರ್ಣ ಬೆಳೆ ನಾಶವಾಗಿದೆ. ಸರ್ಕಾರ ಬರಪೀಡಿತ ಎಂದು ಘೋಷಣೆ ಮಾಡಿದೆ ಹೊರತು ಯಾವುದೇ ಪರಿಹಾರ ನೀಡಿಲ್ಲ. ಕೂಡಲೇ ಎಕರೆಗೆ 40 ಸಾವಿರ ರೂ.ನಂತೆ ಬೆಳೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
    ತಹಸೀಲ್ದಾರ್ ಎಚ್.ಎನ್. ಶಿರಹಟ್ಟಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
    ಪ್ರಮುಖರಾದ ಬಸವರಾಜ ರೊಡ್ಡನವರ, ಪ್ರಭುಸ್ವಾಮಿ ಕರ್ಜಗಿಮಠ, ಸೋಮಣ್ಣ ಹಲಗೇರಿ, ಗುಡ್ಡೇಶ ನಿಟ್ಟೂರ, ರಮೇಶ ಹೊನ್ನಾಳಿ, ಶಂಕರಗೌಡ ಗಂಗನಗೌಡ್ರ, ಪ್ರಭುಗೌಡ ಚನಗೌಡ್ರ, ಮಲ್ಲಿಕ ಮಾಸಣಗಿ, ಗಂಗಾಧರ ಬೂದನೂರು, ಹನುಮಂತರಾಜ್ ಚನ್ನಗೌಡರ, ಈರಣ್ಣ ಬುಡಪನಹಳ್ಳಿ, ಬಸನಗೌಡ ಪಾಟೀಲ ಮತ್ತಿತರರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts