More

    ಸಕಲ ಸರ್ಕಾರಿ ಗೌರವಗಳೊಂದಿಗೆ ಕ್ಯಾಪ್ಟನ್ ಅರ್ಜುನನ ಅಂತ್ಯಕ್ರಿಯೆ; ಪ್ರೀತಿಯ ಆನೆಗೆ ಮಾವುತರಿಂದ ಭಾವುಕ ವಿದಾಯ

    ಹಾಸನ: ವಿಶ್ವವಿಖ್ಯಾತ ನಾಡಹಬ್ಬ ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತು ತನ್ನದೇ ಆದ ಛಾಪು ಮೂಡಿಸಿ ಸಾಂಸ್ಕೃತಿಕ ರಾಯಭಾರಿ ಎಂದೇ ಖ್ಯಾತಿ ಪಡೆದಿದ್ದ ಸಾಕಾನೆ ಅರ್ಜುನ ಇನ್ನು ಮುಂದೆ ನೆನೆಪು ಮಾತ್ರ. ಒಂಟಿ ಸಲಗದ ಜತೆ ಹೋರಾಡಿ ಮೃತಪಟ್ಟಿದ್ದ ಅರ್ಜುನನ ಅಂತ್ಯಸಂಸ್ಕಾರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದಬ್ಬಳ್ಳಿಕಟ್ಟೆ ಗ್ರಾಮದ ಬಳಿ ನೆರವೇರಿಸಲಾಗಿದೆ. 

    ಅರ್ಜುನನ ಕಳೆಬರಕ್ಕೆ ಮೈಸೂರು ರಾಜಮನೆತನದ ಅರ್ಚಕರು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದ್ದರು. ಬಳಿಕ ಜಿಲ್ಲಾಡಳಿತದಿಂದ ಅರ್ಜುನನಿಗೆ ಸರ್ಕಾರಿ ಗೌರವ ಸಮರ್ಪಿಸಲಾಯಿತು. ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಗೌರವ ಸಲ್ಲಿಸಲಾಗಿದೆ. ಮಾವುತ ವಿನು ಹಾಗೂ ಕಾವಾಡಿಗ ಪ್ರೀತಿಯ ಆನೆಗೆ ಕಣ್ಣೀರಿಡುತ್ತಲೇ ಪೂಜೆ ಮಾಡುವ ಮೂಲಕ ನಮನ ಸಲ್ಲಿಸಿದ್ದರು.

    22 ವರ್ಷಗಳ ಕಾಲ ದಸರಾದಲ್ಲಿ ಭಾಗಿಯಾಗಿದ್ದ ಅರ್ಜುನ 8 ಬಾರಿ ಅಂಬಾರಿಯನ್ನು ಯಶಸ್ವಿಯಾಗಿ ಹೊತ್ತಿದ್ದ ಅರ್ಜುನ ಈ ರೀತಿಯ ದುರಂತ ಅಂತ್ಯ ಕಂಡಿದ್ದು ನಿಜಕ್ಕೂ ದುಃಖದ ಸಂಗತಿ. ಪೂಜೆ ಎಲ್ಲಾ ಮುಗಿದ ಮೇಲೆ ಜೆಸಿಬಿಯಿಂದ 15 ಅಡಿಗಳ ಆಳದವರೆಗೆ ಗುಂಡಿ ತೋಡಲಾಯಿತು. ಈ ವೇಳೆ ಅಲ್ಲಿದ್ದ ಜನರು ಸಮಾಧಿಗೆ ಉಪ್ಪು, ಸುಣ್ಣ, ಬ್ಲೀಚಿಂಗ್ ಪೌಡರ್ ಹಾಕಿದರು. ಬಳಿಕ ಜೆಸಿಬಿ ಸಹಾಯದಿಂದ ಮೃತದೇಹವನ್ನ ಸಮಾಧಿಗೆ ಇಳಿಸಿ ಮಣ್ಣು ಮುಚ್ಚಲಾಗಿದೆ.

    Arjuna Cremation

    ಇದನ್ನೂ ಓದಿ: ಪಂಚರಾಜ್ಯ ಚುನಾವಣೆಯಲ್ಲಿ ಸೋಲು; ಇಂಡಿಯಾ ಮೈತ್ರಿಕೂಟ ಸಭೆ ರದ್ದು

    ಹಾಸನ ಜಿಲ್ಲಾಧಿಕಾರಿ ಸತ್ಯಭಾಮ, ಎಸ್ಪಿ ಮೊಹಮದ್ ಸುಜೀತಾ, ಡಿಸಿಎಫ್ ಮೋಹನ್ ಕುಮಾರ್ ಸಮ್ಕುಖದಲ್ಲಿ ಗೌರವಾರ್ಪಣೆ ಸಲ್ಲಿಸಿದರು. ಈ ವೇಳೆ ರಾಜ್ಯ ಅರಣ್ಯ ಇಲಾಖೆ ಭಾಗವಾಗಿ ಅಂತ್ಯಕ್ರಿಯೆಯಲ್ಲಿ ಸಹಾಯಕ ಅರಣ್ಯ ಮುಖ್ಯ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಶಾಶ್ವತಿ ಮಿಶ್ತ ಉಪಸ್ಥಿತರಿದ್ದರು.

    ಪೊಲೀಸರಿಂದ ಲಾಠಿಚಾರ್ಜ್​

    ಅರ್ಜುನ ಆನೆ ಅಂತ್ಯಕ್ರಿಯೆಗೆ ವಿರೋಧಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದು, ಪ್ರತಿಭಟನಾನಿರತರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಮೈಸೂರಿನ ಬಳ್ಳೆ ಸಾಕಾನೆ ಶಿಬಿರಕ್ಕೆ ಮೃತ ಅರ್ಜುನನನ್ನು ಕೊಂಡೊಯ್ಯಲು ಮಾವುತರು ಒತ್ತಾಯಿಸಿದ್ದಾರೆ. ಇತ್ತ ಸ್ಥಳೀಯರು ಸೂಕ್ತ ಸ್ಥಳದಲ್ಲಿ ಅಂತ್ಯಕ್ರಿಯೆ ಮಾಡಿ ಸ್ಮಾರಕ ನಿರ್ಮಿಸುವಂತೆ ಮನವಿ ಮಾಡಿದ್ದಾರೆ. ಈ ವೇಳೆ ಸ್ಥಳೀಯರು ಹಾಗೂ ಅಧಿಕಾರಿಗಳ ನಡುವೆ ಮಾತಿನ ಚಕಮಕಿಯಾಗಿದ್ದು, ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಬಳಿಕ ಗುಂಪನ್ನು ಚದುರಿಸಲು ಪೊಲೀಸರು ಲಾರಿಚಾರ್ಜ್​ ಮಾಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts