More

    ಕೆಎಸ್​ಆರ್​ಟಿಸಿ ಬಸ್​ ಮೇಲೆ ಕಾಡಾನೆ ದಾಳಿ: ದಂತದಿಂದ ತಿವಿದ ಗಜ, ಸ್ವಲ್ಪದರಲ್ಲೇ ಪ್ರಯಾಣಿಕರು ಪಾರು

    ಮಂಗಳೂರು: ಕೆಎಸ್​ಆರ್​ಟಿಸಿ ಸ್ಲೀಪರ್​ ಕೋಚ್​ ಬಸ್​ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ಹೆದ್ದಾರಿಯ ಅನಿಲ ಎಂಬಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಅದೃಷ್ಟವಶಾತ್​ ಯಾವುದೇ ಪ್ರಯಾಣಿಕರಿಗೆ ಹಾನಿಯಾಗಿಲ್ಲ.

    ಕೆಎಸ್​ಆರ್​ಟಿಸಿ ಬಸ್​ ಪುತ್ತೂರಿನಿಂದ ಕಾಣಿಯೂರು ಮಾರ್ಗವಾಗಿ ಸುಬ್ರಹ್ಮಣ್ಯ ಮೂಲಕ ಬೆಂಗಳೂರಿಗೆ ತೆರಳುತ್ತಿತ್ತು. ಅನಿಲ ಎಂಬಲ್ಲಿ ರಸ್ತೆ ಬದಿ ನಿಂತಿದ್ದ ಕಾಡಾನೆಯನ್ನು ಕಂಡ ಬಸ್ ಚಾಲಕ, ಆನೆಯನ್ನು ತಪ್ಪಿಸಲು ಯತ್ನಿಸಿದರು. ಆದರೂ ದಾಳಿ ಮಾಡಿದ ಕಾಡಾನೆ ಬಸ್ಸಿನ ಎಡಭಾಗಕ್ಕೆ ದಂತದಿಂದ ತಿವಿದಿದೆ. ಅದೃಷ್ಟವಶಾತ್​ ಸ್ವಲ್ಪದಲ್ಲೇ ಪ್ರಯಾಣಿಕರು ಪಾರಾಗಿದ್ದಾರೆ.

    ಇದನ್ನೂ ಓದಿ: ಎರಡು ಹೃದಯಗಳನ್ನು ಒಂದು ಮಾಡಿದ ಹಾವು! ಯುವಕ-ಯುವತಿಯ ಪ್ರೀತಿಗೆ ಉರಗನ ನಂಟು

    ಚಾಲಕನ ಸಮಯ ಪ್ರಜ್ಞೆಯಿಂದ ದುರಂತವೊಂದು ತಪ್ಪಿದ್ದು, ಪ್ರಯಾಣಿಕರು ಆನೆ ದಾಳಿ ಸಂಭವದಿಂದ ಪಾರಾಗಿದ್ದಾರೆ. ದಾಳಿಯಿಂದ ಬಸ್ಸಿಗೆ ಹಾನಿಯಾಗಿದೆ. ಘಟನಾ ಸ್ಥಳಕ್ಕೆ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಬಸ್​ ಬೆಂಗಳೂರಿನತ್ತ ತೆರಳಿತು. (ದಿಗ್ವಿಜಯ ನ್ಯೂಸ್​)

    ಮಹಿಳೆಯರಿಗೆ ಸರ್ಕಾರಿ ಬಸ್​ನಲ್ಲಿ ಉಚಿತ ಬಸ್​ ಪ್ರಯಾಣ: ಪುರುಷರಿಗೆ ಶುರುವಾಯ್ತು ಹೊಸ ಟೆನ್ಶನ್​

    ರಾಮಲಲ್ಲಾ ಪ್ರಾಣಪ್ರತಿಷ್ಠೆ ಉತ್ಸವ; ಡಿಸೆಂಬರ್ ಅಥವಾ ಜನವರಿಯಲ್ಲಿ ಕಾರ್ಯಕ್ರಮ | ಪ್ರಧಾನಿ ಮೋದಿ ಭಾಗಿ

    ಸೈಕ್ಲೋನ್​ನಿಂದ ಕೃಷಿಗೆ ಕಂಟಕ; ಆಹಾರ ಉತ್ಪಾದನೆ ಕುಂಠಿತ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts