More

    ರಾತ್ರೋರಾತ್ರಿ ಕಾಡಾನೆ ಪ್ರತ್ಯಕ್ಷ; ಸಾರ್ವಜನಿಕರು-ರೈತರಲ್ಲಿ ಆತಂಕ

    ಅಮರಾವತಿ: ಆಹಾರವನ್ನು ಅರಸುತ್ತ ಕಾಡಾನೆಯೊಂದು ನಾಡಿಗೆ ಬಂದು ರೈಲು ನಿಲ್ದಾಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಬೀಡುಬಿಟ್ಟಿರುವ ಘಟನೆ ಆಂಧ್ರಪ್ರದೇಶದ ಪಾರ್ವತಿಪುರ ಜಿಲ್ಲೆಯಲ್ಲಿ ನಡೆದಿದೆ.

    ಆನೆ ರೈಲು ನಿಲ್ದಾಣದಲ್ಲಿ ನಡೆದಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರು ಹಾಘೂ ರೈತರು ಆತಂಕದಲ್ಲಿ ಕಾಲಕಳೆಯುತ್ತಿದ್ದಾರೆ.

    ಇದನ್ನೂ ಓದಿ: ಕೇರಳ ಬಾಂಬ್​ ಬ್ಲ್ಯಾಸ್ಟ್​ ಪ್ರಕರಣ; ದಾಳಿಯ ಹೊಣೆಹೊತ್ತು ಪೊಲೀಸರಿಗೆ ಶರಣಾದ ಆರೋಪಿ

    ಈ ಕುರಿತು ಪ್ರತಿಕ್ರಿಯಿಸಿರುವ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು, ಕಳೆದ ಕೆಲವು ದಿನಗಳಿಂದ ಪಾರ್ವತಿಪುರಂ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾಡಾನೆಗಳು ಕಾಣಿಸಿಕೊಳ್ಳುತ್ತಿದ್ದು, ಆನೆಗಳನ್ನು ಹಿಡಿಯಲು ವಿಶೇಷ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ. ರೈತರು ಹಾಗೂ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ಶೀಘ್ರದಲ್ಲೇ ಆನೆಗಳನ್ನು ಸೆರೆಹಿಡಯಲಾಗುವುದು ಎಂದು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಈ ಹಿಂದೆ ಇದೇ ಜಿಲ್ಲೆಯಲ್ಲಿ ಗರುಗುಬಿಲ್ಲಿ ಮಂಡಲದ ಗೊಟ್ಟಿವಲಸ ಗ್ರಾಮಕ್ಕೆ ನುಗ್ಗಿದ ಕಾಡಾನೆಗಳ ಹಿಂಡು ಅಪಾದ ಪ್ರಮಾಣದ ಬೆಳೆಗಳನ್ನು ನಾಶಪಡಿಸಿದ್ದವು. ಇದೀಗ ಮತ್ತೊಮ್ಮೆ ಪಾರ್ವತಿಪುರದಲ್ಲಿ ಆನೆಗಳ ಹಿಂಡು ಕಾಣಿಸಿಕೊಂಡಿದ್ದು, ಸಾರ್ವಜನಿಕರು ಹಾಗೂ ರೈತರು ಆತಂಕದಲ್ಲಿ ದಿನದೂಡುವಂತಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts