ಕಡ್ಡಾಯ ಮತದಾನ ಮಾಡಿ

ಕಲಬುರಗಿ: ಹದಿನೆಂಟು ವರ್ಷ ತುಂಬಿದ ಎಲ್ಲ ವಿದ್ಯಾರ್ಥಿ /ವಿದ್ಯಾರ್ಥಿನಿಯರು ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಬೇಕೆಂದು ಜಿಲ್ಲಾ ಪಂಚಾಯಿತಿ ಸಿಇಒ, ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಡಾ. ಪಿ. ರಾಜಾ ಕರೆ ನೀಡಿದರು.
ಕಲಬುರಗಿ ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಸ್ವೀಪ್ ಕಾರ್ಯಕ್ರಮದಲ್ಲಿ ಮಾತನಾಡಿದರು. 2019ರ ಜನವರಿ 1ಕ್ಕೆ 18ವರ್ಷ ತುಂಬಿದ ವಿದ್ಯಾರ್ಥಿಗಳು ಇನ್ನೂ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆ ಮಾಡದಿದ್ದಲ್ಲಿ, ಆಯಾ ಬೂತ್ ಮಟ್ಟದ ಬಿ.ಎಲ್.ಓ. ಗಳನ್ನು ಸಂಪಕರ್ಿಸಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆ ಮಾಡಬೇಕು. ಈ ಮೂಲಕ ಮತದಾನದಲ್ಲಿ ಪಾಲ್ಗೊಳ್ಳಬೇಕೆಂದು ತಿಳಿಸಿದರು.
ಪ್ರಜಾಪ್ರಭುತ್ವದಲ್ಲಿ ದೃಢವಿಶ್ವಾಸವುಳ್ಳ ಭಾರತದ ಪೌರರಾದ ನಾವು, ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ ನ್ಯಾಯ ಸಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿ ಹಿಡಿಯುತ್ತೇವೆಂದು ಮತ್ತು ಪ್ರತಿಯೊಂದು ಚುನಾವಣೆಯಲ್ಲಿ ನಿರ್ಭೀತರಾಗಿ ಮತ್ತು ಧರ್ಮ, ಜನಾಂಗ, ಜಾತಿ, ಮತ, ಭಾಷೆ ಅಥವಾ ಯಾವುದೇ ಪ್ರೇರಣೆಗಳ ದಾಕ್ಷಿಣ್ಯಗಳಿಂದ, ಪ್ರಭಾವಿಗಳಿಂದ ಪ್ರಭಾವಿತರಾಗದೆ ಮತ ಚಲಾಯಿಸುತ್ತೇನೆಂದು ಈ ಮೂಲಕ ಪ್ರತಿಜ್ಞೆ ಸ್ವೀಕರಿಸುತ್ತೇವೆ ಎಂದು ವಿದ್ಯಾಥರ್ಿಗಳು ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಿವಶರಣಪ್ಪ ಮಾಳೆಗಾಂವ, ಕಾಲೇಜಿನ ಪ್ರಾಂಶುಪಾಲ ಶಿವಾಜಿ ಪಾಟೀಲ, ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ಸುಮಾರು 1200 ಕ್ಕೂ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.

ತಮ್ಮ ತಮ್ಮ ಮನೆಗಳಲ್ಲಿ ಯಾವುದಾದರೂ ಸದಸ್ಯರ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗದಿದ್ದರೆ ತಕ್ಷಣ ಸೇರಿಸಿ ಅವರು ಮತದಾನ ಮಾಡುವಂತೆ ಅರಿವು ಮುಡಿಸಬೇಕು.
ಡಾ.ಪಿ.ರಾಜಾ, ಅಧ್ಯಕ್ಷ,
ಜಿಲ್ಲಾ ಸ್ವೀಪ್ ಸಮಿತಿ ಕಲಬುರಗಿ.