More

  ಆರ್​ಸಿಬಿ ಪರ ಹೊಸ ದಾಖಲೆ ಬರೆದ ಎಲ್ಲಿಸ್​ ಪೆರ್ರಿ

  ನವದೆಹಲಿ: ಇಲ್ಲಿನ ಅರುಣ್​ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್​ ನಡುವಿನ ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ವನಿತೆಯರು 5 ರನ್​ಗಳ ರೋಚಕ ಜಯ ಸಾಧಿಸುವ ಮೂಲಕ ಫೈನಲ್​ಗೆ ಲಗ್ಗೆ ಇಟ್ಟಿದ್ದಾರೆ. ಮಾರ್ಚ್​ 17ರಂದು ನಡೆಯುವ ಫಯನಲ್​ ಪಂದ್ಯದಲ್ಲಿ ಆರ್​ಸಿಬಿ ವನಿತೆಯರು ಡೆಲ್ಲಿ ಕ್ಯಾಪಿಟಲ್ಸ್​ ಎದುರು ಕಪ್​ಗಾಗಿ ಸೆಣಸಾಡಲಿದ್ದಾರೆ.

  ಶುಕ್ರವಾರ (ಮಾರ್ಚ್​ 15) ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಇದಾಗ್ಯೂ ಏಕಾಂಗಿಯಾಗಿ ಹೋರಾಡಿದ ಎಲ್ಲಿಸ್ ಪೆರ್ರಿ 50 ಎಸೆತಗಳಲ್ಲಿ 8 ಫೋರ್ ಹಾಗೂ 1 ಸಿಕ್ಸರ್​ ಸಹಿತ 66 ರನ್​ಗಳ ಕೊಡುಗೆ ನೀಡಿದರು. ಈ ಮೂಲಕ ತಂಡ 135 ರನ್​ ಕಲೆಹಾಕುವಲ್ಲಿ ಪೆರ್ರಿ ಪ್ರಮುಖ ಪಾತ್ರ ವಹಿಸಿದರು.

  136 ರನ್​ಗಳ ಸುಲಭ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ 20 ಓವರ್​ಗಳಲ್ಲಿ 6 ವಿಕೆಟ್​ ನಷ್ಟಕ್ಕೆ 130 ರನ್​ಗಳಿಸಲಷ್ಟೇ ಶಕ್ತಾರಾದರು. ಈ ಮೂಲಕ ಆರ್​ಸಿಬಿ 5 ವಿಕೆಟ್​ಗಳ ಜಯ ಸಾಧಿಸಿದೆ.ಈ ಪಂದ್ಯದಲ್ಲಿ ಅರ್ಧಶತಕದ ಜೊತೆಗೆ 1 ವಿಕೆಟ್ ಕಬಳಿಸಿ ಮಿಂಚಿದ್ದ ಎಲ್ಲಿಸ್ ಪೆರ್ರಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ವಿಶೇಷ ಎಂದರೆ ಈ ಪಂದ್ಯದ ಮೂಲಕ ಎಲ್ಲಿಸ್​ ಪೆರ್ರಿಸ್​ ವುಮೆನ್ಸ್​ ಪ್ರೀಮಿಯರ್​ ಲೀಗ್​ನಲ್ಲಿ ಆರ್​ಸಿಬಿ ಪರ ಹೊಸ ದಾಖಲೆ ಒಂದನ್ನು ಬರೆದಿದ್ದಾರೆ.

  ಇದನ್ನೂ ಓದಿ: ಮೊದಲ ದಿನದ ಪ್ರಚಾರದಲ್ಲಿ ರಸ್ತೆ ಬದಿ ಚಾಯ್​ ಪೆ ಚರ್ಚಾ ನಡೆಸಿದ ಯದುವೀರ್​!

  ಎಲ್ಲಿಸ್​ ಪೆರ್ರಿ ಮುಂಬೈ ವಿರುದ್ಧದ ಎಲಿಮಿನೇಟರ್​ ಪಂದ್ಯದಲ್ಲಿ 60 ರನ್​ಗಳನ್ನು ಬಾರಿಸುವ ಮೂಲಕ ವುಮೆನ್ಸ್​ ಪ್ರೀಮಿಯರ್ ಲೀಗ್​ನಲ್ಲಿ 500+ ರನ್​ ಕಲೆಹಾಕಿದ ಮೊದಲ ಆರ್​ಸಿಬಿ ಬ್ಯಾಟರ್ ಎನಿಸಿಕೊಂಡಿದ್ದಾರೆ. ಆರ್​ಸಿಬಿ ಪರ ಇದುವರೆಗೆ 16 ಇನಿಂಗ್ಸ್​ ಆಡಿರುವ ಎಲ್ಲಿಸ್ ಪೆರ್ರಿ 565 ರನ್​ಗಳನ್ನು ಕಲೆಹಾಕಿದ್ದಾರೆ. ಈ ಮೂಲಕ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಆರ್​ಸಿಬಿ ಪರ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎಂಬ ದಾಖಲೆ ಬರೆದಿದ್ದಾರೆ. ಇದರ ಜೊತೆಗೆ WPL ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ 2ನೇ ಆಟಗಾರ್ತಿ ಎನಿಸಿಕೊಂಡಿದ್ದಾರೆ.

  ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕಿ ಮೆಗ್ ಲ್ಯಾನಿಂಗ್. ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಒಟ್ಟು 17 ಇನಿಂಗ್ಸ್ ಆಡಿರುವ ಲ್ಯಾನಿಂಗ್ 653 ರನ್ ಕಲೆಹಾಕಿ ಈ ದಾಖಲೆ ನಿರ್ಮಿಸಿದ್ದಾರೆ. ಇದೀಗ 565 ರನ್​ ಕಲೆಹಾಕಿರುವ ಎಲ್ಲಿಸ್ ಪೆರ್ರಿ ಫೈನಲ್ ಪಂದ್ಯದಲ್ಲಿ 89 ರನ್ ಸಿಡಿಸಿದರೆ ಅಗ್ರಸ್ಥಾನಕ್ಕೇರುವ ಮೂಲಕ ಮತ್ತೊಂದು ದಾಖಲೆಯನ್ನು ನಿರ್ಮಿಸಬಹುದಾದ ಅವಕಾಶವನ್ನು ಹೊಂದಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts