More

    ರೇವ್​ ಪಾರ್ಟಿಯಲ್ಲಿ ಹಾವಿನ ವಿಷ ಬಳಕೆ; ಪ್ರಮುಖ ಆರೋಪಿ ಎಲ್ಷಿಶ್​ ಯಾದವ್​ನನ್ನು ಬಂಧಿಸಿ ಬಿಡುಗಡೆ ಮಾಡಿದ ಪೊಲೀಸರು

    ಜೈಪುರ: ಉತ್ತರಪ್ರದೇಶದ ನೋಯ್ಡಾದಲ್ಲಿ ರೇವ್​ ಪಾರ್ಟಿ ಆಯೋಜನೆ ಮಾಡಿದ ಆರೋಪದ ಮೇಲೆ ಹಿಂದಿ ಬಿಗ್​ ಬಾಸ್​ ಸೀಸನ್​-2 ವಿನ್ನರ್​ ಎಲ್ವಿಶ್​ ಯಾದವ್ ಉತ್ತರಪ್ರದೇಶ ಪೊಲೀಸರು ಈವರೆಗೂ ಬಂಧಿಸದೆ ಇರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

    ಇದೀಗ ಎಲ್ವಿಶ್​ ಯಾದವ್​ನನ್ನು ರಾಜಸ್ಥಾನದ ಕೋಟಾದಲ್ಲಿ ಬಂಧಿಸಿದ ಪೊಲೀಸರು ವಿಚಾರಣೆ ಬಳಿಕ ಬಿಟ್ಟು ಕಳುಹಿಸಿದ್ದಾರೆ. ಇದರ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸರ ನಡೆ ಸಾಕಷ್ಟು ಖಂಡನೆಗೆ ಗುರಿಯಾಗಿದೆ.

    ಇದನ್ನೂ ಓದಿ: ಚುನಾವಣೆಯ ಹೊಸ್ತಿಲಲ್ಲಿ ನಿವೃತ್ತಿಯ ಮಾತುಗಳನ್ನಾಡಿದ ವಸುಂಧರಾ ರಾಜೇ; ಕಾರಣ ಹೀಗಿದೆ

    ರಾಜಸ್ಥಾನದ ಕೋಟಾದಲ್ಲಿ ಚುನಾವಣೆ ಕರ್ತವ್ಯದ ವೇಳೆ ಪೊಲೀಸ್​ ಅಧಿಕಾರಿಗಳೆ ಅನುಮಾನದ ಮೇರೆಗೆ ಎಲ್ವಿಶ್​ ಯಾದವ್​ ವಾಹನವನ್ನು ತಡೆದು ಪರಿಶೀಲನೆ ನಡೆಸಿದ್ದಾರೆ. ಬಳಿಕ ಅನುಮಾನದ ಮೇರೆಗೆ ಆತನನ್ನು ವಶಕ್ಕೆ ಪಡೆದು ನೋಯ್ಡಾ ಪೊಲೀಸರಿಗೆ ತಿಳಿಸಿದ್ದಾರೆ. ಬಳಿಕ ಅಲ್ಲಿನ ಪೊಲೀಸ್​ ಅಧಿಕಾರಿಗಳು ರೇವ್​ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಮೇಲಿರುವ ಆರೋಪಗಳು ಇನ್ನು ಸಾಬೀತಾಗಿಲ್ಲ ಬಂಧಿಸುವ ಅವಶ್ಯಕತೆಯಿಲ್ಲ ಎಂದು ಹೇಳಿದ್ದಾರೆ. ವಿಚಾರಣೆ ನಡೆಸಿ ನೋಯ್ಡಾ ಪೊಲೀಸರ ಶಿಫಾರಸ್ಸಿನ ಮೇರೆಗೆ ಬಿಟ್ಟು ಕಳುಹಿಸಿದ್ದೇವೆ ಎಂದು ಕೋಟಾ ಜಿಲ್ಲೆಯ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಇತ್ತ ರೇವ್​ ಪಾರ್ಟಿಗೆ ಸಂಬಂಧಿಸಿದಂತೆ ಪ್ರಕರಣದ ಮುಖ್ಯ ಆರೋಪಿ ಎಲ್ವಿಶ್​ ಯಾದವ್​ ವಿರುದ್ಧ ಮಾಡಲಾಗಿರುವ ಆರೋಪಗಳು ಈವರೆಗೆ ಸಾಬೀತಾಗಿಲ್ಲ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದ್ದು, ರೇವ್​ ಪಾರ್ಟಿಯಲ್ಲಿ ಎಲ್ವಿಶ್​ ಪಾತ್ರದ ಕುರಿತು ಸ್ಪೋಟಕ ಮಾಹಿತಿಯನ್ನು ನೀಡಿದ್ದಾರೆ ಎಂದು ಹೇಳಲಾಗಿದೆ. ಎಲ್ವಿಶ್​ ವಿರುದ್ಧ ಸಾಕಷ್ಟು ಕ್ರಿಮಿನಲ್​ ಮೊಕದ್ದಮೆಗಳು ದಾಖಲಾಗಿದ್ದು, ಪ್ರಭಾವಿಗಳು ಈತನ ಬೆನ್ನಿಗೆ ನಿಂತಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಹಲವು ಪ್ರಶ್ನೆಗಳು ಉದ್ಭವಿಸಿವೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts