More

    ಅಂಬೇಡ್ಕರ್ ಆದರ್ಶ ಮೈಗೂಡಿಸಿಕೊಳ್ಳಿರಿ

    ಸೋಮವಾರಪೇಟೆ: ಮಾನವ ಧರ್ಮದ ಪ್ರತಿಪಾದಕ, ಸಮಾಜ ಸುಧಾರಕ, ಸಂವಿಧಾನ ತಜ್ಞ, ಮಾನವ ಹಕ್ಕುಗಳ ಹೋರಾಟಗಾರ ಡಾ.ಬಿ.ಆರ್.ಅಂಬೇಡ್ಕರ್ ಅವರ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದು ಶಿರಂಗಾಲ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಲೋಕೇಶ್ ಹೇಳಿದರು.

    ತಾಲೂಕು ಆಡಳಿತ ವತಿಯಿಂದ ತಾಲೂಕು ಕಚೇರಿ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ 133ನೇ ಜನ್ಮದಿನಾಚರಣೆ ಸಮಾರಂಭದಲ್ಲಿ ಮುಖ್ಯ ಭಾಷಣಕಾರರಾಗಿ ಭಾಗವಹಿಸಿ ಮಾತನಾಡಿದರು.

    ಅಂಬೇಡ್ಕರ್ ಅವರನ್ನು ಭಾರತ ಸಂವಿಧಾನದ ವಾಸ್ತುಶಿಲ್ಪಿ, ದಲಿತ ಚಳವಳಿಯ ಪಿತಾಮಹಾ ಎಂದು ಪರಿಗಣಿಸಲಾಗಿದೆ. ಅವರು ಭಾರತದಲ್ಲಿ ಜಾತಿ ವ್ಯವಸ್ಥೆ ಮತ್ತು ಅಸ್ಪಶ್ಯರು ಎದುರಿಸುತ್ತಿದ್ದ ತಾರತಮ್ಯ ಮತ್ತು ದಬ್ಬಾಳಿಕೆ ವಿರುದ್ಧ ಹೋರಾಟ ಮಾಡಿ, ನ್ಯಾಯ ಒದಗಿಸಿಕೊಟ್ಟ ಮಹಾನ್ ಚೇತನ ಎಂದು ಬಣ್ಣಿಸಿದರು.
    ಅಂಬೇಡ್ಕರ್ ಅವರು ಸ್ವಾತಂತ್ರೃ ಭಾರತದ ಸಂವಿಧಾನವನ್ನು ರೂಪಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದಾರೆ. ಮಹಿಳೆಯರು, ಕಾರ್ಮಿಕರು, ಅಸ್ಪಶ್ಯರು, ಅಲ್ಪಸಂಖ್ಯಾತರ ಹಕ್ಕುಗಳು ಮತ್ತು ಹಿತಾಸಕ್ತಿ ಕಾಪಾಡಲು ಶ್ರಮಿಸಿದ್ದಾರೆ. ಇವತ್ತು ನಾವೆಲ್ಲ ಪಡೆಯುತ್ತಿರುವ ಸೌಲಭ್ಯಗಳು ಅಂಬೇಡ್ಕರ್ ಅವರ ಕೊಡುಗೆಯಾಗಿದೆ ಎಂದು ಹೇಳಿದರು.

    ಉದ್ಘಾಟನೆ: ಬೆಳಗ್ಗೆ ಪಟ್ಟಣದ ಬಾಣಾವರ ರಸ್ತೆಯಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ತಹಸೀಲ್ದಾರ್ ನವೀನ್ ಕುಮಾರ್ ಮಾಲಾರ್ಪಣೆ ಮಾಡಿ, ನಂತರ ಸಭಾಕಾರ್ಯಕ್ರಮ ಉದ್ಘಾಟಿಸಿದರು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದೇಗೌಡ, ಬಿಇಒ ಭಾಗ್ಯಮ್ಮ, ಎಒ ಭವಾನಿ ಶಂಕರ್, ಲೋಕ್ಯಾನಾಯಕ್, ರಜಿನಿಕಾಂತ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts