ಅರಕಲಗೂಡು: ಯುವ ಜನತೆ ವಿದ್ಯಾರ್ಥಿ ದಿಸೆಯಲ್ಲೇ ಗುಣಮಟ್ಟದ ಶಿಕ್ಷಣ ಪಡೆಯುವ ಜತೆಗೆ ಸೇವಾ ಮನೋಭಾವ ಮೈಗೂಡಿಸಿಕೊಳ್ಳಬೇಕು ಎಂದು ಶಾಸಕ ಎ. ಮಂಜು ಕಿವಿಮಾತು ಹೇಳಿದರು.
ತಾಲೂಕಿನ ಬಿದರೂರು ಗ್ರಾಮದಲ್ಲಿ ಕೊಣನೂರು ಬಿ.ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಭಾರತಕ್ಕಾಗಿ ಯುವಜನತೆ ಮತ್ತು ಯುವ ಜನತೆಗಾಗಿ ಡಿಜಿಟಲ್ ಸಾಕ್ಷರತೆ ಶೀರ್ಷಿಕೆಯಡಿ ಶನಿವಾರ ಆಯೋಜಿಸಿದ್ದ 2023-24ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.
ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳು ವಿದ್ಯಾರ್ಥಿ ಜೀವನದಲ್ಲಿ ತುಂಬ ಪ್ರಮುಖವಾಗಿದ್ದು, ವಿದ್ಯಾರ್ಥಿಗಳು ತಮ್ಮ ಮುಂದಿನ ಜೀವನ ರೂಪಿಸಿಕೊಳ್ಳಲು ಈ ಶಿಬಿರ ಸಹಕಾರಿಯಾಗಲಿದೆ. ಶ್ರಮದಾನ ಮಾತ್ರವಲ್ಲದೆ ವಿವಿಧ ಕಾರ್ಯಕ್ರಮಗಳ ಮೂಲಕ ಶಿಬಿರದ ಸದುಪಯೋಗ ಪಡಿಸಿಕೊಳ್ಳುವಂತೆ ಮನವಿ ಮಾಡಿದರು.
ಗ್ರಾಪಂ ಅಧ್ಯಕ್ಷ ಮಹೇಶ್, ಉಪಾಧ್ಯಕ್ಷೆ ಅನಿತಾ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಚೌಡೇಗೌಡ, ಪ್ರಾಂಶುಪಾಲ ರಾಜೀವ್, ಗ್ರಾಮಸ್ಥರು ಇದ್ದರು.