ಭಜನೆಯಿಂದ ಭಾವನಾತ್ಮಕ ಬಾಂಧವ್ಯ ವೃದ್ಧಿ

gan
Published on

ಕುಂದಾಪುರ: ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿ ಅವರ ಶತಮಾನೋತ್ಸವದ ಪ್ರಯುಕ್ತ ಪ್ರತಿ ಊರಿನ ಮನೆಮನೆಗಳಲ್ಲಿ ನಡೆಯುತ್ತಿರುವ ಫರ್ ಘರ್ ಭಜನೆ ಕಾರ್ಯಕ್ರಮ ಮೂಲಕ ಸಮಾಜದಲ್ಲಿ ಭಾವನಾತ್ಮಕ ಬಾಂಧವ್ಯ ವೃದ್ಧಿಯಾಗುತ್ತಿದೆ ಎಂದು ಶ್ರೀ ಕಾಶೀ ಮಠಾಧೀಶ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು.

ಶ್ರೀ ಕಾಶಿ ಮಠದ ಪರಮಪೂಜ್ಯ ಶ್ರೀ ಮಾಧವೇಂದ್ರ ತೀರ್ಥ ಸ್ವಾಮೀಜಿ ಅವರ ಪುಣ್ಯತಿಥಿ ಆರಾಧನಾ ಮಹೋತ್ಸವದ ಪ್ರಯುಕ್ತ ಕೋಟೇಶ್ವರದ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನದಲ್ಲಿ ಬುಧವಾರ ಜರುಗಿದ ಗುರು ಗುಣಗಾನ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.

ಮುಂಬೈನ ವಾಲ್ಕೇಶ್ವರದಲ್ಲಿರುವ ಶ್ರೀ ಮಾಧವೇಂದ್ರ ತೀರ್ಥ ಸ್ವಾಮೀಜಿ ಅವರ ವೃಂದಾವನವು ಜೀವಂತ ಸಮಾಧಿಯಾಗಿದ್ದು, ಇಂದು ಸಹ ಭಕ್ತರ ಕಷ್ಟಗಳನ್ನು ಪರಿಹರಿಸುತ್ತಿದ್ದಾರೆ ಎಂದರು ದೇವಸ್ಥಾನದ ಆಡಳಿತ ಮೊಕ್ತೇಸರ ಕೆ.ದಿನೇಶ್ ಕಾಮತ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net