ನೀನು ಶತಕೋಟಿಯಲ್ಲಿ ಒಬ್ಬಳು ...ಪವಿತ್ರಾ ಗೌಡ ನೆನೆದು ಮಗಳು ಖುಷಿ ಗೌಡ ಭಾವುಕ ಪೋಸ್ಟ್​

pavitra gowda
Published on

ಬೆಂಗಳೂರು: ಸ್ನೇಹಿತೆ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳಹಿಸಿದ್ದಾನೆ ಎಂದು ರೇಣುಕಾಸ್ವಾಮಿಯನ್ನು ಕೊಲೆ ಮಾಡಲಾಗಿದೆ ಎನ್ನುವ ಆರೋಪದಲ್ಲಿ ದರ್ಶನ್​ ಹಾಗೂ ಪವಿತ್ರಾ ಗೌಡ ಗ್ಯಾಂಗ್​​ ಜೈಲಿನಲ್ಲಿದ್ದಾರೆ. ಜೈಲಿನಲ್ಲಿರುವ ತಾಯಿ ಕುರಿತಾಗಿ ಪವಿತ್ರಾ ಗೌಡ ಪುತ್ರಿ ಖುಷಿ ಗೌಡ ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾಳೆ. ಈ ಪೋಸ್ಟ್​​ ಸಖತ್​ ವೈರಲ್ ಆಗುತ್ತಿದೆ.

ಈ ಭಾರೀ ಪವಿತ್ರಾ ಗೌಡರ ಮಗಳು ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಪೋಸ್ಟ್​ವೊಂದನ್ನು ಶೇರ್ ಮಾಡಿಕೊಂಡಿದ್ದಾರೆ. ಆ ಫೋಟೋ ಜೊತೆಗೆ ಅಮ್ಮನ ಬಗ್ಗೆ ಹಾಡಿ ಹೊಗಳಿದ್ದಾರೆ.

ಅವಳು ನನ್ನ ಪ್ರೇರಣೆ, ಪರಿಸ್ಥಿತಿ ಎಷ್ಟೇ ಇದ್ದರೂ ಹೇಗೆ ಗಟ್ಟಿಯಾಗಿರಬೇಕೆಂದು ಕಲಿಸುತ್ತಾಳೆ. ಅವಳು ಯಾವಾಗಲೂ ತುಂಬಾ ಮುಕ್ತ ಮತ್ತು ಬೆಂಬಲ ನೀಡುತ್ತಾಳೆ. ಅವಳು ಶತಕೋಟಿಯಲ್ಲಿ ಒಬ್ಬಳು. ಅವಳಂತಹ ತಾಯಿಯನ್ನು ಪಡೆಯಲು ನಾನು ನಿಜವಾಗಿಯೂ ತುಂಬಾ ಕೃತಜ್ಞನಾಗಿದ್ದೇನೆ ಮತ್ತು ಅದೃಷ್ಟಶಾಲಿಯಾಗಿದ್ದೇನೆ. ನಾನು ನಿನ್ನನ್ನು ತುಂಬಾ ಪ್ರೀತಿಸುತ್ತೇನೆ ಅಮ್ಮ ಅಂತ ಬರೆದುಕೊಂಡಿದ್ದಾರೆ.

ಸ್ಯಾಂಡಲ್‌ವುಡ್‌ ನಟಿ ಹಾಗೂ ಫ್ಯಾಷನ್ ಡಿಸೈನರ್ ಪವಿತ್ರಾ ಗೌಡ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ತಾಯಿ ನಡೆಸುತ್ತಿದ್ದ ಫ್ಯಾಷನ್‌ ಬೋಟಿಕ್‌ ಅನ್ನು ಮಗಳು ಖುಷಿ ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ರಾಜರಾಜೇಶ್ವರಿ ನಗರದ ನಿವಾಸದ ಬಳಿ ಇರುವ ರೆಡ್‌ ಕಾರ್ಪೆಟ್‌ 777 ಶಾಪ್ ಅನ್ನು ಖುಷಿ ಗೌಡ ನೋಡಿಕೊಳ್ಳುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net