More

    5 ವರ್ಷದಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜುಗಳಲ್ಲಿ ಕ್ಯಾನ್ಸರ್ ಚಿಕಿತ್ಸೆಗೆ ಒತ್ತು

    ಶಿವಮೊಗ್ಗ: ಪ್ರತಿಯೊಂದು ಜಿಲ್ಲೆಗೂ ಕ್ಯಾನ್ಸರ್ ಆಸ್ಪತ್ರೆಯ ಅವಶ್ಯಕತೆ ಹೆಚ್ಚಿದೆ. ಹಾಗಾಗಿ ಮುಂದಿನ ಐದು ವರ್ಷದಲ್ಲಿ ಎಲ್ಲ ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲೂ ಕ್ಯಾನ್ಸರ್ ಚಿಕಿತ್ಸೆಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಹೇಳಿದರು.

    ನಗರದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ಆಶ್ರಯದಲ್ಲಿ ಶನಿವಾರ ಕಿದ್ವಾಯಿ ಮಾದರಿ ಆಸ್ಪತ್ರೆ ಕಟ್ಟಡದ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಅವರು, ರಾಜ್ಯದಲ್ಲಿ 70 ವೈದ್ಯಕೀಯ ಕಾಲೇಜುಗಳಿದ್ದು ಅದರಲ್ಲಿ 25 ಸರ್ಕಾರಿ ಮೆಡಿಕಲ್ ಕಾಲೇಜುಗಳಿವೆ. ವೈದ್ಯಕೀಯ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ವಿಭಾಗವಾರು ಕ್ಯಾನ್ಸರ್ ಆಸ್ಪತ್ರೆ ಕಾರ್ಯಾರಂಭಕ್ಕೆ ಆದ್ಯತೆ ನೀಡಲಾಗಿದೆ ಎಂದರು.
    ಬಡವರ ಮಕ್ಕಳು ಸಹ ವೈದ್ಯರಾಗಬೇಕೆಂಬ ಉದ್ದೇಶದಿಂದ ರಾಜ್ಯಾದ್ಯಂತ ಸರ್ಕಾರಿ ಮೆಡಿಕಲ್ ಕಾಲೇಜುಗಳನ್ನು ಸ್ಥಾಪಿಸಲಾಗುತ್ತಿದೆ. ಪ್ರತಿ ಜಿಲ್ಲೆಗೊಂದು ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ವಿಭಾಗಗಳ ಕೇಂದ್ರ ಸ್ಥಾನದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಲಾಗುತ್ತಿದೆ. ಶಿವಮೊಗ್ಗದಲ್ಲಿ ಕ್ಯಾನ್ಸರ್ ಆಸ್ಪತ್ರೆಗೆ ಗುದ್ದಲಿಪೂಜೆ ನೆರವೇರಿದ್ದು, ತುಮಕೂರು, ಮಂಡ್ಯ, ಮೈಸೂರಿನಲ್ಲಿ ಕೆಲಸ ನಡೆಯುತ್ತಿದೆ. ಕಲ್ಬುರ್ಗಿಯಲ್ಲಿ ಸೇವೆ ಆರಂಭಿಸಲಾಗಿದೆ ಎಂದರು.
    ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯ ನಿರ್ದೇಶಕ ಡಾ.ಲೋಕೇಶ್ ಮಾತನಾಡಿದರು. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಮಾಜಿ ಎಂಎಲ್‌ಸಿ ಆರ್.ಪ್ರಸನ್ನಕುಮಾರ್, ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ಪಾಲಿಕೆ ಸದಸ್ಯರಾದ ಎಚ್.ಸಿ.ಯೋಗೇಶ್, ರೇಖಾ ರಂಗನಾಥ್, ಡಿಎಂಇ ಡಾ. ಸುಜಾತಾ ರಾಥೋಡ್, ಡಿಸಿ ಡಾ. ಆರ್.ಸೆಲ್ವಮಣಿ, ಜಿಪಂ ಸಿಇಒ ಸ್ನೇಹಲ್ ಲೋಖಂಡೆ, ಎಸ್ಪಿ ಜಿ.ಕೆ.ಮಿಥುನ್‌ಕುಮಾರ್, ಮುಖ್ಯ ಅಭಿಯಂತರರಾದ ಬಿ.ಕೆ.ಪವಿತ್ರಾ, ಸಿಮ್ಸ್ ನಿರ್ದೇಶಕ ಡಾ. ವಿರೂಪಾಕ್ಷಪ್ಪ, ವೈದ್ಯಕೀಯ ಅಧೀಕ್ಷಕ ಡಾ. ತಿಮ್ಮಪ್ಪ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts