
ವಿಜಯವಾಣಿ ಸುದ್ದಿಜಾಲ ಗುಡಿಬಂಡೆ
ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಹಾಗೂ ಉತ್ತಮ ಶಿಕ್ಷಣ ದೊರೆಯುತ್ತಿದ್ದು, ಮಕ್ಕಳಿಗೆ ತುಂಬಾ ಉಪಯುಕ್ತವಾಗಿದೆ. ಸರ್ಕಾರಿ ಸೌಲಭ್ಯಗಳ ತೆಗೆ ಕೆಲ ದಾನಿಗಳು ಸಹ ಶಾಲೆಗಳಿಗೆ ಕೊಡುಗೆ ನೀಡಿದರೆ ಸರ್ಕಾರಿ ಶಾಲೆಗಳು ಮತ್ತಷ್ಟು ಅಭಿವೃದ್ಧಿಯಾಗಲಿದೆ ಎಂದು ಬೆಂಗಳೂರಿನ ಸಾರಥಿ ಸಂಸ್ಥೆಯ ದಾಮೋದರ್ ರಾಜು ಅಭಿಪ್ರಾಯಪಟ್ಟರು.
ತಾಲೂಕಿನ ಬೀಚಗಾನಹಳ್ಳಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸರ್ಕಾರಿ ಪ್ರೌಢ ಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬೆಂಗಳೂರಿನ ಸಾರಥಿ ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ಲೇಖನ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿದರು.
ಇಂದಿನ ಕಾಲದಲ್ಲಿ ಸರ್ಕಾರಿ ಶಾಲೆಗಳ ಕುರಿತು ಕೆಲವರಿಗೆ ಅಸಮಾಧಾನವಿದೆ. ಆದರೆ, ಸರ್ಕಾರಿ ಶಾಲೆಗಳಲ್ಲಿ ಓದಿದ ಮಕ್ಕಳು ಇಂದು ದೇಶದಲ್ಲಿ ಉನ್ನತ ಸ್ಥಾನಗಳನ್ನು ಅಲಂಕರಿಸಿದ್ದಾರೆ. ಯಾವುದೇ ಖಾಸಗಿ ಶಾಲೆಗಳಿಗಿಂತ ಕಡಿಮೆಯಿಲ್ಲ ಎಂಬಂತೆ ನುರಿತ ಹಾಗೂ ಅನುಭವಿ ಶಿಕ್ಷಕರಿಂದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸ ದೊರೆಯಲಿದೆ. ಸರ್ಕಾರದಿಂದ ಈಗಾಗಲೇ ಅನೇಕ ಸೌಲಭ್ಯಗಳು ಮಕ್ಕಳಿಗೆ ಸಿಗುತ್ತಿದ್ದು, ಸಂಘ ಸಂಸ್ಥೆಗಳು ಅಥವಾ ದಾನಿಗಳು ಮತ್ತಷ್ಟು ಕೊಡುಗೆ ನೀಡಿದರೆ ಸರ್ಕಾರಿ ಶಾಲೆಗಳು ಮತ್ತಷ್ಟು ಅಭಿವೃದ್ಧಿಯಾಗಲು ಸಾಧ್ಯ ಎಂದರು.
ಶಿಕ್ಷಕ ರಾಮಾಂಜಿ ಮಾತನಾಡಿ, ಸರ್ಕಾರದಿಂದ ಮಕ್ಕಳಿಗೆ ಉಚಿತ ಶಿಕ್ಷಣದ ತೆಗೆ ಮಧ್ಯಾಹ್ನದ ಬಿಸಿಯೂಟ, ವಿದ್ಯಾರ್ಥಿ ವೇತನ, ಪಠ್ಯಪುಸ್ತಕಗಳು ಸೇರಿದಂತೆ ಹಲವು ಸೌಲಭ್ಯಗಳನ್ನು ನೀಡುತ್ತಿದೆ. ಇವುಗಳನ್ನು ಮಕ್ಕಳು ಸದ್ಬಳಕೆ ಮಾಡಿಕೊಳ್ಳಬೇಕು. ಇದರ ತೆಗೆ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ದಾನಿಗಳು ಸಾಕಷ್ಟು ಕೊಡುಗೆಗಳನ್ನು ನೀಡುತ್ತಿದ್ದಾರೆ. ಈ ಕೊಡುಗೆಗಳು ಮತ್ತಷ್ಟು ಹೆಚ್ಚಾಗಬೇಕು. ಪಾಲಕರೂ ಸಹ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸಬೇಕು ಎಂದರು.
ಬೀಚಗಾನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ 300 ವಿದ್ಯಾರ್ಥಿಗಳಿಗೆ ನೋಟ್ ಬುಕ್, ಬ್ಯಾಗ್ ಸೇರಿದಂತೆ ಲೇಖನ ಸಾಮಗ್ರಿಗಳನ್ನು ವಿತರಣೆ ಮಾಡಿದರು.
ಈ ಸಮಯದಲ್ಲಿ ಪ್ರೌಢಶಾಲಾ ಶಿಕ್ಷಕರಾದ ನಂದಾದೇವಿ, ಜಿ.ಮಂಜುನಾಥ್, ಕೆ.ಸಿ.ಮಂಜುನಾಥ್, ಉಷಾ, ದೇವೇಂದ್ರ, ಪ್ರಾಥಮಿಕ ಶಾಲಾ ಸಹ ಶಿಕ್ಷಕರಾದ ರಜನಿ ಕುಮಾರ್, ಜಿ.ವಿ.ನರಸಿಂಹಮೂರ್ತಿ, ಕಮಲಾ, ಅನುಶ್ರೀ, ಅಮೋಘ್, ಎಸ್‌ಡಿಎಂಸಿ ಅಧ್ಯಕ್ಷ ರವಿ ಇತರರು ಇದ್ದರು.