ಬ್ರಾಹ್ಮಣ ಸಮಾಜದ ಸಂಘಟನೆಗೆ ಒತ್ತು

27sgr2
ಸಾಗರದ ಶೃಂಗೇರಿ ಶಂಕರಮಠದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮವನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು. ಗೋಪಾಲಕೃಷ್ಣ ಬೇಳೂರು, ಅಶ್ವಿನಿಕುಮಾರ್, ಪ್ರಫುಲ್ಲಾ ಮಧುಕರ್, ಅನಿತಾಕುಮಾರಿ ಇತರರಿದ್ದರು.
Published on

ಸಾಗರ: ಬ್ರಾಹ್ಮಣ ಸಮಾಜದಲ್ಲಿ ಮುಖಂಡರ ಸಂಖ್ಯೆ ಕಡಿಮೆ. ಬ್ರಾಹ್ಮಣ ಸಮುದಾಯದ ಬೇಡಿಕೆಯನ್ನು ಸರ್ಕಾರದ ಮಟ್ಟದಲ್ಲಿ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ನಗರದ ಶೃಂಗೇರಿ ಶಂಕರಮಠದಲ್ಲಿ ಮಂಗಳವಾರ ಸನ್ಮಾನ ಸ್ವೀಕರಿಸಿ ಮಾತನಾಡಿ, ಜನವರಿ ತಿಂಗಳಲ್ಲಿ ಬ್ರಾಹ್ಮಣ ಸಮಾಜದ ಅಧ್ಯಕ್ಷ ಅಶೋಕ್ ಹಾರ‌್ನಳ್ಳಿ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು, ಸಮುದಾಯದ ಸಂಘಟನೆಗೆ ಒತ್ತು ನೀಡಲಾಗುವುದು ಎಂದು ತಿಳಿಸಿದರು.

ಶೃಂಗೇರಿ ಶಂಕರಮಠದ ಧರ್ಮದರ್ಶಿ ಅಶ್ವಿನಿಕುಮಾರ್ ಮಾತನಾಡಿ, ದಿನೇಶ್ ಗುಂಡೂರಾವ್ ಅವರು ಶೃಂಗೇರಿ ಶಂಕರಮಠದ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದ್ದು, ಆರೋಗ್ಯ ಸಚಿವರಾಗಿಯೂ ಬದಲಾವಣೆಗೆ ಮುನ್ನುಡಿ ಬರೆದಿದ್ದಾರೆ. ಶೃಂಗೇರಿ ಶಂಕರಮಠದ ಸುವರ್ಣ ಭಾರತಿ ಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಮೂಲಕ ನಮ್ಮಲ್ಲಿ ಉತ್ಸಾಹ ತುಂಬಿದ್ದಾರೆ ಎಂದರು.

ಶಾಸಕ ಗೋಪಾಲಕೃಷ್ಣ ಬೇಳೂರು, ವಿಧಾನಪರಿಷತ್ ಮಾಜಿ ಸದಸ್ಯೆ ಪ್ರಫುಲ್ಲಾ ಮಧುಕರ್, ಪ್ರಮುಖರಾದ ಕೆ.ಎಸ್.ಸುಬ್ರಾವ್, ಐ.ಎನ್.ಸುರೇಶಬಾಬು, ಅನಿತಾಕುಮಾರಿ, ಮ.ಸ.ನಂಜುಂಡಸ್ವಾಮಿ, ಸರಸ್ವತಿ ನಾಗರಾಜ್, ಗಣಪತಿ ಮಂಡಗಳಲೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net