More

    ವ್ಯಾಸಂಗದ ಜತೆಗೆ ಕ್ರೀಡೆಗೂ ಒತ್ತು ನೀಡಿ

    ಕೋಲಾರ: ವಿದ್ಯಾರ್ಥಿಗಳು ವ್ಯಾಸಂಗದ ಜತೆಗೆ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಪಿಯು ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಮಚಂದ್ರಪ್ಪ ಹೇಳಿದರು.

    ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಬಿಜಿಎಸ್ ಪಿಯು ಕಾಲೇಜು, ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಪಿಯು ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ, ಸದೃಢ ದೇಹ, ಸದೃಢ ಮನಸ್ಸು ಇರುವಂತಹ ಮಕ್ಕಳು ಏನಾದರು ಸಾಧಿಸಬಹುದು. ಆದ್ದರಿಂದ ಮಕ್ಕಳು ಕ್ರೀಡೆಗಳಲ್ಲಿ ಭಾಗವಸುವುದರಿಂದ ಅರೋಗ್ಯವನ್ನು ಸದೃಢವಾಗಿಟ್ಟುಕೊಳ್ಳಬಹುದು ಎಂದು ತಿಳಿಸಿದರು.
    ಸಾಮಾಜಿಕ ಜಾಲತಾಣಗಳ ವ್ಯಾಮೋಹಕ್ಕೆ ಒಳಗಾಗಿ ವಿದ್ಯಾರ್ಥಿಗಳು ಆರೋಗ್ಯದ ಕಡೆ ಸರಿಯಾಗಿ ಗಮನಹರಿಸುತ್ತಿಲ್ಲ. ಇದು ಶೈಕ್ಷಣಿಕ ಪ್ರಗತಿ ಮೇಲೂ ತೀವ್ರ ಪರಿಣಾಮ ಬೀರುತ್ತಿದೆ. ಪಾಲಕರು ಮಕ್ಕಳ ಖುಷಿಗೆ ಮೊಬೈಲ್ ಕೊಡಿಸುವುದನ್ನು ಬಿಡಬೇಕು ಎಂದರು.
    ಕ್ರೀಡೆಯಲ್ಲಿ ಸಾಧನೆ ಮಾಡಬಹುದು ಎಂಬುದಕ್ಕೆ ಇಂದಿನ ಕ್ರೀಡಾಪಟುಗಳೇ ಸಾಕ್ಷಿ. ಆಟ ಎಂಬುದು ಮಕ್ಕಳಿಗೆ ವಿದ್ಯೆ ಇದ್ದ ಹಾಗೆ, ಕ್ರೀಡೆಗಳಲ್ಲಿ ಪಾಲ್ಗೊಳ್ಳುವವರು ಸಾಧನೆ ಜತೆಗೆ ಶಿಸ್ತು ಕಾಪಾಡಿಕೊಳ್ಳಬಹುದು. ಮಕ್ಕಳು ಓದಿನಷ್ಟೇ ಕ್ರೀಡೆಗೂ ಒತ್ತು ನೀಡಬೇಕು ಎಂದು ಹೇಳಿದರು.
    ಕ್ರೀಡೆಯಲ್ಲಿ ಸೋಲು-ಗೆಲುವು ಸಹಜ, ಕ್ರೀಡಾ ಮನೋಭಾವದಿಂದ ಆಟವಾಡಿದರೆ ಗೆಲುವು ಸಿಕ್ಕೇ ಸಿಗುತ್ತದೆ. ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವವರು ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಬೇಕು. ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಆಯ್ಕೆಯಾದವರು ರಾಜ್ಯಮಟ್ಟದಲ್ಲಿ ಪಾಲ್ಗೊಳ್ಳಬಹುದು. ವಿವಿಧ ಕ್ರೀಡೆಗಳಲ್ಲಿ ಆಯ್ಕೆಯಾದವರು ಇಲಾಖೆಯಿಂದ ಖಾತ್ರಿ ಪತ್ರವನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು ಎಂದರು. ಜಿಲ್ಲಾಮಟ್ಟದಿಂದ ರಾಜ್ಯಮಟ್ಟದ ಕ್ರೀಡಾಕ್ಕೆ ಆಯ್ಕೆಯಾಗಿರುವ ವಿಜೇತ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ಹಾಗೂ ಬಹುಮಾನ ವಿತರಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts