More

    ಸೆ.26ಕ್ಕೆ ಅಂಗವಿಕಲರಿಗೆ ಉದ್ಯೋಗ ಮೇಳ

    ಬೆಂಗಳೂರು: ಕೇಂದ್ರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯಕ್ಕೆ ಸೇರಿದ ವಿಕಲಚೇತನರ ರಾಷ್ಟ್ರೀಯ ವೃತ್ತಿ ಸೇವಾ ಕೇಂದ್ರವು ಪೀಣ್ಯದ ಉದ್ಯೋಗ ಮಹಾ ನಿರ್ದೇಶನಾಲಯ, ಅಮೆರಿಕ ಇಂಡಿಯಾ ಫೌಂಡೇಷನ್ ಮತ್ತು ಬೆಂಗಳೂರಿನ ಸರಕಾರಿ ಗಿರಿಧರ ರಾಮನಾರಾಯಣ ಇನ್‌ಸ್ಟಿಟ್ಯೂಟ್ ಆ್ ಕಮರ್ಷಿಯಲ್ ಪ್ರಾಕ್ಟೀಸ್ ಇವರ ಸಹಯೋಗದಲ್ಲಿ ಸೆ.26ರಂದು ಅಂಗವಿಕಲರಿಗಾಗಿ ಉದ್ಯೋಗ ಮೇಳ ನಡೆಯಲಿದೆ.

    ನಗರದ ಕೆ.ಆರ್.ವೃತ್ತದಲ್ಲಿರುವ ಸರಕಾರಿ ಗಿರಿಧರ ರಾಮನಾರಾಯಣ ಇನ್‌ಸ್ಟಿಟ್ಯೂಟ್ ಆ್ ಕಮರ್ಷಿಯಲ್ ಪ್ರಾಕ್ಟೀಸ್ ಆವರಣದಲ್ಲಿ ನಿರುದ್ಯೋಗಿ ಅಂಗವಿಕಲರ ಯುವಕ-ಯುವತಿಯರು ಅಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1ರ ವರೆಗೆ ಮೇಳದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಯ ಉದ್ಯೋಗದಾತರು ಪಾಲ್ಗೊಳ್ಳುತ್ತಿದ್ದು ಆ ಕಂಪನಿಗಳಲ್ಲಿ 1,000ಕ್ಕೂ ಅಧಿಕ ಖಾಲಿ ಹುದ್ದೆಗಳನ್ನು ತುಂಬಲು ಅವಕಾಶ ಇದೆ.

    ಉದ್ಯೋಗ ಮೇಳದಲ್ಲಿ ಭಾಗವಹಿಸಲು ಪ್ರವೇಶ ಉಚಿತವಾಗಿದ್ದು, ಸ್ಥಳದಲ್ಲಿಯೇ ನೋಂದಣಿ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ವೈಯಕ್ತಿಕ ವಿವರ ಹಾಗೂ ಅಗತ್ಯ ದಾಖಲೆಗಳೊಂದಿಗೆ ಉದ್ಯೋಗ ಮೇಳದಲ್ಲಿ ಹಾಜರಾಗಬಹುದು ಎಂದು ವಿಕಲಚೇತನರ ರಾಷ್ಟ್ರೀಯ ವ್ಯಕ್ತಿ ಸೇವಾ ಕೇಂದ್ರದ ಉಪ ನಿರ್ದೇಶಕರು (ಪುನರ್ವಸತಿ) ಹಾಗೂ ಕೇಂದ್ರದ ಮುಖ್ಯಸ್ಥರು ಕೋರಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts