More

    ಉದ್ಯೋಗ ಖಾತ್ರಿ ಸಮರ್ಪಕ ಜಾರಿ ಮಾಡಿ: ಕೂಲಿಕಾರ್ಮಿಕ ಸಂಘಟನೆ ಮನವಿ

    ದೇವದುರ್ಗ: ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಎಲ್ಲ ಗ್ರಾಪಂ ವ್ಯಾಪ್ತಿಯಲ್ಲಿ ಸಮರ್ಪಕವಾಗಿ ಜಾರಿಮಾಡಿ ಕೂಲಿಕಾರರಿಗೆ ಸೂಕ್ತ ಕೆಲಸ ನೀಡುವಂತೆ ಒತ್ತಾಯಿಸಿ ಜಾಲಹಳ್ಳಿ ಗ್ರಾಪಂ ನೌಕರ ವೆಂಕೋಬ ಪಲಕನಮರಡಿಗೆ ಕೃಷಿ ಕೂಲಿಕಾರ್ಮಿಕರ ಸಂಘಟನೆ ಮುಖಂಡರು ಬುಧವಾರ ಮನವಿ ಸಲ್ಲಿಸಿದರು.

    ಇದನ್ನೂ ಓದಿ: ಉದ್ಯೋಗ ಖಾತ್ರಿ ಯೋಜನೆಯಡಿ ಪ್ರತಿ ಕುಟುಂಬಕ್ಕೆ 90 ದಿನ ನಿರಂತರ ಕೆಲಸ 

    ಜಾಲಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಕಾಮಗಾರಿ ಆರಂಭಿಸಿಲ್ಲ

    ತಾಲೂಕಿನ ವಿವಿಧ ಗ್ರಾಪಂಗಳಲ್ಲಿ ಉದ್ಯೋಗ ಖಾತ್ರಿ ಯೋಜನೆ ಸಮರ್ಪಕವಾಗಿ ಜಾರಿಮಾಡುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಇದರಿಂದ ಬಡವರು ಕೆಲಸವಿಲ್ಲದೆ ಮಹಾನಗರಗಳಿಗೆ ಗುಳೆ ಹೋಗುತ್ತಿದ್ದಾರೆ. ಜಾಲಹಳ್ಳಿ ಗ್ರಾಪಂನಲ್ಲಿ ಉದ್ಯೋಗಕ್ಕಾಗಿ ಕೂಲಿಕಾರರು ಅರ್ಜಿ ಸಲ್ಲಿಸಿದರೂ ಕೆಲಸ ನೀಡಿಲ್ಲ. ಕೆಲಕಡೆ ಮೊದಲ ಹಂತದ ಕೂಲಿಕೆಲಸ ಪೂರ್ಣಗೊಂಡರೂ ಜಾಲಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಕಾಮಗಾರಿ ಮಾತ್ರ ಆರಂಭಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ನರೇಗಾ ಯೋಜನೆ ಬಗ್ಗೆ ಜನರಿಗೆ ಜಾಗೃತಿ ಮೂಡಿಸಬೇಕು

    ಕೂಡಲೇ ಯೋಜನೆ ಸಮರ್ಪಕವಾಗಿ ಜಾರಿಮಾಡಿ ಅರ್ಜಿ ಸಲ್ಲಿಸಿದ ಎಲ್ಲರಿಗೂ ಕೆಲಸ ನೀಡಬೇಕು. ನರೇಗಾ ಯೋಜನೆ ಬಗ್ಗೆ ಗ್ರಾಮೀಣ ಭಾಗದ ಜನರಿಗೆ ಜಾಗೃತಿ ಮೂಡಿಸಬೇಕು ಎಂದರು.ಸಂಘಟನೆ ತಾಲೂಕು ಅಧ್ಯಕ್ಷ ಯಲ್ಲಪ್ಪ ಗಚ್ಚಿನಮನಿ, ಕಾರ್ಯದರ್ಶಿ ಸುರೇಶ್‌ಗೌಡ ಹಂಪರಗುಂದಿ, ಮುಖಂಡರಾದ ಬಸವರಾಜ ತೇಕೂರು, ನರೇಶ್, ಶಾಂತಕುಮಾರ್ ಅಯ್ಯಪ್ಪ, ಲಿಂಗಣ್ಣ ಮಕಾಶಿ, ಸಂಗಮೇಶ ಮೂಲಿಮನಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts