More

    ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

    ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು.

    ಇಲ್ಲಿನ ಹೋ.ಚಿ. ಬೋರಯ್ಯ ಪ್ರಥಮದರ್ಜೆ ಕಾಲೇಜಿನ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಯೋಗದಲ್ಲಿ ಆಯೋಜಿಸಿದ್ದ ಉದ್ಯೋಗ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದರು.

    ದೇಶದಲ್ಲಿ ನಿರುದ್ಯೋಗ ಸಮಸ್ಯೆ ದೊಡ್ಡ ಸವಾಲಾಗಿದೆ. ಅದನ್ನು ಸರಿದೂಗಿಸಲು ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದರು.

    ತಾಲೂಕಿನಲ್ಲಿ ಸಾವಿರಾರು ನಿರುದ್ಯೋಗಿ ಪದವೀಧರರಿದ್ದಾರೆ. ಅವರ ಜೀವನೋಪಾಯಕ್ಕೆ ಉದ್ಯೋಗ ಅವಶ್ಯಕ. ಆದ್ದರಿಂದ ಖಾಸಗಿ ಕ್ಷೇತ್ರವೇ ಆದರೂ ಸರಿ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ನಿರ್ವಹಿಸಬೇಕು ಎಂದರು.

    ಉದ್ಯೋಗ ಕೊಡಿಸುವುದಾಗಿ ಹೇಳುವ ಮದ್ಯವರ್ತಿಗಳಿಗೆ ಹಣಕೊಟ್ಟು ಮೋಸ ಹೋಗಬಾರದು. ಈ ಬಗ್ಗೆ ಪಾಲಕರು ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು.

    ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಅಕಾರಿ ಡಿ. ರವೀಂದ್ರ, ಪ್ರಾಚಾರ್ಯ ನಾರಾಯಣಸ್ವಾಮಿ, ನಾಯಕ ಸಮಾಜದ ಕಾರ್ಯದರ್ಶಿ ಸೂರಲಿಂಗಪ್ಪ, ತಾಪಂ ಮಾಜಿ ಸದಸ್ಯ ಸೋಮನಹಳ್ಳಿ ಶ್ರೀನಿವಾಸ್, ಪ್ರಾಧ್ಯಾಪಕ ನಾಗರಾಜ್, ಗಂಗಾಧರಪ್ಪ, ಸೀತಾರಾಂ, ಮಾಜಿ ಕಾರ್ಯದರ್ಶಿ ಬಿ.ಆರ್. ಲೋಕೇಶ್, ಸಂಸ್ಥೆಯ ನಿರ್ದೇಶಕ ಡಿ.ಆರ್. ಹನುಮಂತಪ್ಪ ಇದ್ದರು.
    ಮೇಳದಲ್ಲಿ 19 ಕಂಪನಿಗಳು ಭಾಗವಹಿಸಿದ್ದವು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts