More

    ಪಿಡಿಒಗಳಿಗೆ ಜನನ, ಮರಣ ನೋಂದಣಿ ಅಧಿಕಾರ ನೀಡಿ

    ಜಮಖಂಡಿ: ಜನನ ಮತ್ತು ಮರಣ ನೋಂದಣಿ ಅಧಿಕಾರವನ್ನು ಪಿಡಿಒಗಳಿಗೆ ನೀಡದಿದ್ದರೆ ಜು. 17 ರಂದು ರಾಜ್ಯಾದ್ಯಂತ ಗ್ರಾಮ ಪಂಚಾಯಿತಿಗಳಲ್ಲಿ ಅಸಹಕಾರದ ಮೂಲಕ ಪ್ರತಿಭಟನೆ ನಡೆಸಲಾಗುವುದೆಂದು ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಜು ವಾರದ ಎಚ್ಚರಿಕೆ ನೀಡಿದ್ದಾರೆ.

    ಇದನ್ನೂ ಓದಿ: ವಿದ್ಯಾರ್ಥಿನಿ ದತ್ತು ಪಡೆದ ವರ್ತಕ

    ನಗರದ ಕಾನಿಪ ಸಂಘದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನನ ಮತ್ತು ಮರಣ ನೋಂದಣಿ ಅಧಿಕಾರಿಯನ್ನಾಗಿ ಅಧಿಕಾರವನ್ನು ಗ್ರಾಮ ಲೆಕ್ಕಾಧಿಕಾರಿಗಳಿಗೆ ನೀಡಿದ್ದು ಸರಿಯಲ್ಲ. ಸರ್ಕಾರ ಆದೇಶವನ್ನು ಕೂಡಲೇ ಹಿಂಪಡೆಯಬೇಕೆಂದು ಆಗ್ರಹಿಸಿದರು.

    ಈ ಹಿಂದೆ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳನ್ನು ಜನನ ಮರಣಗಳ ನೋಂದಣಾಧಿಕಾರಿಗಳನ್ನಾಗಿ ಹಾಗೂ ಗ್ರಾಮಲೆಕ್ಕಾಧಿಕಾರಿಗಳನ್ನು ಜನನ ಮರಣಗಳ ಉಪನೋಂದಣಾಧಿಕಾರಿಗಳನ್ನಾಗಿ ನೇಮಕಗೊಳಿಸಿ 2022ರ ಫೆ.22ರಂದು ಆದೇಶಿಸಲಾಗಿತ್ತು.

    ಆದರೆ, ಈ ಆದೇಶಕ್ಕೆ ಇಂದಿನ ಸರ್ಕಾರ ತಿದ್ದುಪಡಿ ಮಾಡಿ ಗ್ರಾಪಂ ಪಿಡಿಒ ಅಧಿಕಾರಿಗಳನ್ನು ಉಪನೋಂದಣಾಧಿಕಾರಿಗಳನ್ನಾಗಿ ಮತ್ತು ಗ್ರಾಮ ಲೆಕ್ಕಾಧಿಕಾರಿಗಳನ್ನು ನೋಂದಣಾಧಿಕಾರಿಗಳನ್ನಾಗಿ ನೇಮಕಗೊಳಿಸಿ ಆದೇಶ ಹೊರಡಿಸಿರುವುದು ಸರಿಯಾದ ಕ್ರಮವಲ್ಲ ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts