ಕನ್ನಡಿಗರಿಗೆ ಉದ್ಯೋಗ ಕಲ್ಪಿಸಲು ಕಾಯಿದೆ ರೂಪಿಸಿ

blank

ಕೋಲಾರ: ರಾಜ್ಯದಲ್ಲಿ ಸ್ಥಾಪನೆಯಾಗಿರುವ ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ಪ್ರತ್ಯೇಕ ಕಾಯಿದೆ ರೂಪಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎ.ನಾರಾಯಣಗೌಡ ಬಣ) ಕಾರ್ಯಕರ್ತರು ಜಿಲ್ಲಾಡಳಿತ ಭವನದ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ವೇದಿಕೆಯ ಜಿಲ್ಲಾಧ್ಯಕ್ಷ ಮೇಡಿಹಾಳ ರಾಘವೇಂದ್ರ ಮಾತನಾಡಿ, ರಾಜ್ಯದ ನೆಲದಲ್ಲಿ ಸ್ಥಾಪನೆಯಾಗಿರುವ ಕೈಗಾರಿಕೆಗಳ ಸ್ಥಾಪನೆಗೆ ಜಾಗ, ನೀರು, ಗಾಳಿ ಇಲ್ಲಿನದ್ದು ಬೇಕು, ಆದರೆ ಕೆಲಸ ಮಾತ್ರ ಹೊರ ರಾಜ್ಯದವರಿಗೆ ಹೆಚ್ಚಾಗಿ ನೀಡುವ ಮೂಲಕ ಕಂಪನಿ ಮಾಲೀಕರು ಸ್ಥಳೀಯರನ್ನು ಕೆಲಸದಿಂದ ವಂಚಿಸುತ್ತಿದ್ದಾರೆ ಎಂದು ಆರೋಪಿಸಿದರು.
ಮೊದಲು ದಕ್ಷಿಣ ಭಾರತದ ರಾಜ್ಯಗಳಿಂದ ಜನರು ವಲಸೆ ಬಂದು ಇಲ್ಲಿ ನೆಲೆ ನಿಂತರು. ಈಗ ಉತ್ತರ, ಈಶಾನ್ಯ ರಾಜ್ಯಗಳಿಂದ ಜನರ ಪ್ರವಾಹವೇ ಹರಿದುಬರುತ್ತಿದೆ. ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಮಂಗಳೂರಿನAಥ ಮಹಾನಗರಗಳಲ್ಲಿ ವಲಸೆ ಪ್ರಮಾಣ ಮಿತಿ ಮೀರಿದೆ. ಇದಕ್ಕೆಲ್ಲ ಕಾರಣ ಸರ್ಕಾರದ ಗಮನದಲ್ಲಿದ್ದರೂ ಯಾಕೆ ಕ್ರಮಕೈಗೊಳ್ಳುತ್ತಿಲ್ಲ ಎಂದು ಪ್ರಶ್ನಿಸಿದರು.
ಉದ್ಯೋಗದ ವಿಚಾರದಲ್ಲಿ ಕನ್ನಡಿಗರಿಗೆ ಸಾಕಷ್ಟು ಅನ್ಯಾಯವಾಗುತ್ತಿದ್ದು, ಕೈಗಾರಿಕಾ ಉದ್ಯೋಗ ಸ್ಥಾಯಿ ಆದೇಶ ಕಾಯ್ದೆ 1946 ಅನ್ವಯ ರಾಜ್ಯ ಸರ್ಕಾರ ಬಲಿಷ್ಠ ಕಾನೂನು ರೂಪಿಸಿ, ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಒದಗಿಸಬೇಕು. ಎಲ್ಲ ಖಾಸಗಿ ಸಂಸ್ಥೆಗಳಲ್ಲಿ ಸಿ ಮತ್ತು ಡಿ ದರ್ಜೆಯ ಶೇ.100 ಹುದ್ದೆಗಳು ಕನ್ನಡಿಗರಿಗೆ ಮೀಸಲಿಡಬೇಕು. ಎಲ್ಲ ಖಾಸಗಿ ಸಂಸ್ಥೆಗಳ ಇತರ ಹುದ್ದೆಗಳಲ್ಲಿ ಶೇ.80 ಹುದ್ದೆಗಳನ್ನು ಕನ್ನಡಿಗರಿಗೆ ಮೀಸಲಿಡಬೇಕು ಎಂದು ಒತ್ತಾಯಿಸಿದರು.
ಹದಿನೈದು ವರ್ಷ ಕಾಲ ರಾಜ್ಯದಲ್ಲಿ ನೆಲೆಸಿದವರನ್ನು ಕನ್ನಡಿಗರೆಂದು ಪರಿಗಣಿಸುವ ನಿಯಮವಿದೆ. ಅವರಿಗೆ ಕಡ್ಡಾಯ ಕನ್ನಡ ಬರವಣಿಗೆ ಪರೀಕ್ಷೆ ನಡೆಸಿ, ಅದರಲ್ಲಿ ಉತ್ತೀರ್ಣರಾದವರನ್ನು ಮಾತ್ರ ಕನ್ನಡಿಗರೆಂದು ಪರಿಗಣಿಸಬೇಕು. ನಿಯಮಾವಳಿ ಪಾಲಿಸದ ಸಂಸ್ಥೆಗಳಿಗೆ ನೀಡಿರುವ ಮಾನ್ಯತೆ ರದ್ದುಗೊಳಿಸಿ, ಅವುಗಳಿಗೆ ಭೂಮಿ ನೀಡಲಾಗಿದ್ದರೆ ಹಿಂದಕ್ಕೆ ಪಡೆಯುವ ಮತ್ತು ಆ ಸಂಸ್ಥೆಗಳಿಗೆ ನೀಡಿರುವ ಎಲ್ಲ ಸವಲತ್ತುಗಳನ್ನು ಹಿಂದಕ್ಕೆ ಪಡೆಯುವ ನಿಯಮವನ್ನು ರೂಪಿಸಬೇಕು. ನಿಯಮಾವಳಿ ಪಾಲಿಸದ ಸಂಸ್ಥೆಗಳಿಗೆ ದಂಡ ವಿಽಸಿ, ಕ್ರಿಮಿನಲ್ ಪ್ರಕರಣ ಹೂಡಬೇಕು ಎಂದು ಆಗ್ರಹಿಸಿದರು.
ಕೇಂದ್ರ ಸರ್ಕಾರದ ಇಲಾಖೆಗಳು ಮತ್ತು ಸಾರ್ವಜನಿಕ ವಲಯದ ಘಟಕಗಳಲ್ಲಿ ಸಿ ಮತ್ತು ಡಿ ದರ್ಜೆಯ ಹುದ್ದೆಗಳಿಗೆ ಹೊರತಾದ ಉಳಿದೆಲ್ಲ ಹುದ್ದೆಗಳಲ್ಲೂ ಶೇ.90 ಮೀಸಲಾತಿ ನೀಡಬೇಕು. ರಾಜ್ಯ, ಕೇಂದ್ರ ಸರ್ಕಾರದ ಇಲಾಖೆಗಳು, ಸಾರ್ವಜನಿಕ ವಲಯದ ಘಟಕಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸಲು ವಿಫಲರಾಗಿದ್ದು, ಅಽಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು.
ರಾಜ್ಯ ಸರ್ಕಾರ ರೂಪಿಸುವ ಕಾನೂನನ್ನು ಸಮರ್ಪಕವಾಗಿ ಜಾರಿಗೆ ತರಲು ಕನ್ನಡ ಅಭಿವೃದ್ಧಿ ಪ್ರಾಽಕಾರಕ್ಕೆ ಹೆಚ್ಚಿನ ಅಽಕಾರ ನೀಡಬೇಕು. ಮುಂದೆ ಕಾನೂನು ಸಮಸ್ಯೆಗಳು ಎದುರಾದರೆ ಅದನ್ನು ಎದುರಿಸಲು ಸಮರ್ಥ ವಕೀಲರ ತಂಡ ಸಿದ್ಧಪಡಿಸಬೇಕು, ವೇದಿಕೆಯಿಂದ ಸರ್ಕಾರದ ಮುಂದಿಟ್ಟಿರುವ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನಿಡಿದರು.
ವೇದಿಕೆಯ ಪದಾಽಕಾರಿಗಳಾದ ವಿ.ಮುನಿರಾಜು, ಶಂಕರರೆಡ್ಡಿ, ಡಿ.ಕೆ.ಪ್ರಭಾಕರ್ ಗೌಡ, ಲತಾಬಾಯಿ ಮಾಡಿಕ್, ಮಹಬೂಬ್, ವಿ.ಎಂ.ನಾಗೇಶ, ಭಾಗ್ಯಲಕ್ಕ್ಷಿಕ್ಷ್ಮಿ, ಲೀಲಾವತಿ , ರಮಾದೇವಿ, ವಿವಿಧ ತಾಲೂಕು ಅಧ್ಯಕ್ಷರಾದ ಕೋಲಾರ ಶಶಿಕುಮಾರ್, ಮಾಲೂರು ಶ್ರೀನಿವಾಸ, ಬಂಗಾರಪೇಟೆ ರಾಮಪ್ರಸಾದ್, ಮುಳಬಾಗಿಲು ಹುಸೇನ್, ಪದಾಽಕಾರಿಗಳಾದ ನವೀನ್, ಮುರಳಿಧರ, ಲೋಕೇಶ್ ಪಾಲ್ಗೊಂಡಿದ್ದರು.

Share This Article

ರಾತ್ರಿ 12 ಗಂಟೆಯ ಬಳಿಕ ಮಲಗುವ ಅಭ್ಯಾಸವಿದೆಯೇ? ಈ ಡೇಂಜರಸ್​ ಕಾಯಿಲೆ ಬರಬಹುದು ಎಚ್ಚರ | Late Sleeping

Late Sleeping : ಒಬ್ಬ ವ್ಯಕ್ತಿಯು ಆರೋಗ್ಯವಾಗಿರಲು ಪ್ರತಿದಿನ ರಾತ್ರಿ ಸರಿಯಾದ ಸಮಯಕ್ಕೆ ನಿದ್ದೆ ಮಾಡುವುದು…

Skin Care | ಚಳಿಗಾಲದಲ್ಲಿ ತ್ವಚೆ ಆರೈಕೆಗಾಗಿ ಅಲೋವೆರಾ ಫೇಸ್​ಪ್ಯಾಕ್​​; ನೀವೊಮ್ಮೆ ಟ್ರೈ ಮಾಡಿ

ಚಳಿಗಾಲ ಆರಂಭವಾಯಿತು ಎಂದರೆ ಸಾಕು ತ್ವಚೆಯಲ್ಲಿ ಸಣ್ಣದಾಗಿ ಬಿರುಕು ಕಾಣಿಸಿಕೊಳ್ಳುವುದನ್ನು ನಾವು ನೊಡಬಹುದು. ಇನ್ನು ಮುಖದ…

15 ನಿಮಿಷದಲ್ಲಿ ತಯಾರಿಸಿ ಟೊಮೆಟೊ ಸಾಸ್​​; ಇಲ್ಲಿದೆ ನೋಡಿ ಮಾಡುವ ಸಿಂಪಲ್​​ Recipe

ಕೆಲವು ಪದಾರ್ಥಗಳು ಅಂಗಡಿಯಿಂದ ತಂದರೆ ಮಾತ್ರ ರುಚಿಯಾಗಿರುತ್ತದೆ ಎಂದು ಹೇಳಲಾಗುತ್ತದೆ. ಅದರಲ್ಲಿ ಟೊಮೆಟೊ ಸಾಸ್ ಕೂಡ…