25.9 C
Bengaluru
Wednesday, January 22, 2020

ಎನ್​ಕೌಂಟರ್​ಗೆ ದೇಶಾದ್ಯಂತ ಮುಗಿಲು ಮುಟ್ಟಿದ ಸಂಭ್ರಮ: ಪೊಲೀಸರ ಕ್ರಮಕ್ಕೆ ಶ್ಲಾಘನೆ

Latest News

ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಲ್ಲ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟಿದ್ದ ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಕೆ ನೀಡಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ...

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ಹೈದರಾಬಾದ್​​: ದೇಶವನ್ನೇ ಬೆಚ್ಚಿಬೀಳಿಸಿದ ಪಶುವೈದ್ಯೆ ದಿಶಾ ರೆಡ್ಡಿ ಗ್ಯಾಂಗ್ ರೇಪ್​ ಮತ್ತು ಕೊಲೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಎನ್​ಕೌಂಟರ್​​ನಲ್ಲಿ ಹತ್ಯೆ ಮಾಡಿರುವುದಕ್ಕೆ ದೇಶದಾದ್ಯಂತ ಶ್ಲಾಘನೆ ವ್ಯಕ್ತವಾಗಿದೆ.

ಎನ್​ಕೌಂಟರ್​ ಸ್ಥಳದಲ್ಲಿ ಸೇರಿರುವ ಸಾವಿರಾರು ಜನರು ಪೊಲೀಸರ ಕ್ರಮಕ್ಕೆ ಸಂತಸ ವ್ಯಕ್ತಪಡಿಸಿ ಜಯಘೋಷ ಕೂಗುತ್ತಿದ್ದಾರೆ.

ದುರ್ಘಟನೆ ನಡೆದ ಕೇವಲ ಎಂಟು ದಿನಗಳಲ್ಲಿ ಆರೋಪಿಗಳನ್ನು ಗುಂಡಿಕ್ಕಿ ಕೊಂದಿದ್ದಕ್ಕೆ ದೇಶದ ಹಲವೆಡೆ ಜನರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ. ರಾಜಕಾರಣಿಗಳು, ಸಿನಿಮಾ ನಟ-ನಟಿಯರು ಪೊಲೀಸರ ಕ್ರಮವನ್ನು ಸ್ವಾಗತಿಸಿದ್ದು ದಿಶಾಗೆ ನ್ಯಾಯ ಸಿಕ್ಕಿದೆ. ಅತ್ಯಾಚಾರಿಗಳಿಗೆ ಇದೊಂದು ಪಾಠವಾಗಲಿ ಎಂದಿದ್ದಾರೆ.

ಶಾಲಾ ಕಾಲೇಜುಗಳಲ್ಲಂತೂ ಸಂಭ್ರಮ ಮುಗಿಲು ಮುಟ್ಟಿದ್ದು, ವಿದ್ಯಾರ್ಥಿಗಳು ಅದರಲ್ಲೂ ಮುಖ್ಯವಾಗಿ ಹೆಣ್ಣು ಮಕ್ಕಳು ಡಾನ್ಸ್​​ ಮಾಡುವ ಮೂಲಕ ಸಂತಸ ವ್ಯಕ್ತಪಡಿಸುತ್ತಿದ್ದಾರೆ.

ದಿಶಾ ಪೋಷಕರ ಸಂತಸ: ಆರೋಪಿಗಳನ್ನು ಎನ್​ಕೌಂಟರ್ ಮಾಡಿದ್ದಕ್ಕೆ ದಿಶಾ ಪಾಲಕರು ಸಂತಸ ವ್ಯಕ್ತಪಡಿಸಿದ್ದಾರೆ. ನಮ್ಮ ಮಗಳ ಆತ್ಮಕ್ಕೆ ಈಗ ಶಾಂತಿ ಸಿಕ್ಕಿದೆ. ಪೊಲೀಸರಿಗೆ ಮತ್ತು ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತಿದ್ದೇನೆ ಎಂದು ದಿಶಾ ತಂದೆ ಹೇಳಿದ್ದಾರೆ.

ಹೈದರಾಬಾದ್ ಹೊರವಲಯದಲ್ಲಿ ನವೆಂಬರ್ 28 ರಂದು ಪಶುವೈದ್ಯೆ ದಿಶಾಳನ್ನು ನಾಲ್ವರು ಆರೋಪಿಗಳು ಗ್ಯಾಂಗ್​ರೇಪ್​ ಮಾಡಿ ಅಮಾನವೀಯವಾಗಿ ಹತ್ಯೆಗೈದಿದ್ದರು. ಘಟನೆ ನಡೆದ 24 ಗಂಟೆಗಳಲ್ಲಿ ಆರೋಪಿಗಳನ್ನು ಪತ್ತೆಹಚ್ಚಿದ್ದ ತೆಲಂಗಾಣ ಪೊಲೀಸರು, ಘಟನೆ ನಡೆದ 8 ದಿನಗಳೊಳಗೆ ಆರೋಪಿಗಳನ್ನು ಎನ್​ಕೌಂಟರ್​ನಲ್ಲಿ ಹತ್ಯೆಗೈದಿದ್ದಾರೆ.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...