More

    ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್​ಕೌಂಟರ್​​..!

    ಜಮ್ಮು ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್​ಕೌಂಟರ್​ ನಡೆದಿದೆ. ಎನ್‌ಕೌಂಟರ್ ಸ್ಫೋಟವು, ಜಮ್ಮುಕಾಶ್ಮೀರದ ಕುಜಾರ್ ಜಿಲ್ಲೆಯಲ್ಲಿ ಪ್ರಾರಂಭಗೊಂಡಿದೆ.


    ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಕಲಕೋಟೆಯ ಅರಣ್ಯ ಪ್ರದೇಶದಲ್ಲಿ ಅಡಗಿರುವ ಶಂಕಿತ ಭಯೋತ್ಪಾದಕರ ಪತ್ತೆಗೆನಡೆಸುತ್ತಿರುವ ಶೋಧ ಕಾರ್ಯಾಚರಣೆ ಮೂರನೇ ದಿನಕ್ಕೆ ಕಾಲಿಟ್ಟಿದೆ.


    ಸೋಮವಾರದಂದು ನಡೆದ ಭಯೋತ್ಪಾದಕರೊಂದಿಗಿನ ಘರ್ಷಣೆಯಲ್ಲಿ ಇಬ್ಬರು ಸೇನಾ ಸಿಬ್ಬಂದಿ ಗಾಯಗೊಂಡಿದ್ದು, ನಂತರ ಈ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು.


    ಹಿರಿಯ ಅಧಿಕಾರಿಯ ಪ್ರಕಾರ, ಭದ್ರತಾ ಪಡೆಗಳು ಮತ್ತು ಪೊಲೀಸರು ಈ ಪ್ರದೇಶದಲ್ಲಿ ಸಕ್ರಿಯವಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ, ಆದಾಗ್ಯೂ ಶಂಕಿತ ಭಯೋತ್ಪಾದಕರೊಂದಿಗೆ ಇತ್ತೀಚೆಗೆ ಯಾವುದೇ ಎನ್‌ಕೌಂಟರ್‌ಗಳು ನಡೆದಿಲ್ಲ.


    ಅನುಮಾನಾಸ್ಪದ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದ ನಂತರ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ತಂಡವು ಕಲಕೋಟೆಯ ಬ್ರೋಹ್ ಮತ್ತು ಸೂಮ್ ಅರಣ್ಯ ಪ್ರದೇಶಗಳನ್ನು ಸುತ್ತುವರೆದಿದ್ದರಿಂದ ಕಾರ್ಯಾಚರಣೆ ಪ್ರಾರಂಭವಾಯಿತು.


    ಭದ್ರತಾ ಪಡೆಯು ಭಯಯೋತ್ಪಾದಕರ ಸೆರೆ ಹಿಡಿಯುವದನ್ನ ತಪ್ಪಿಸಿಕೊಳ್ಳಲು ಭಯೋತ್ಪಾದಕರು ಸೈನಿಕರ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ಚಕಮಕಿ ನಡೆದಂತಹ ಸಂದರ್ಭದಲ್ಲಿ ಇಬ್ಬರು ಸೇನಾ ಸಿಬ್ಬಂದಿಗೆ ಗಾಯಗಳಾಗಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts