More

    ಈಗಲೂ ಮುಂದುವರಿದಿದೆ ಎನ್​ಕೌಂಟರ್​: ಭಯೋತ್ಪಾದಕರ ಹೊಂಚು ದಾಳಿಯಲ್ಲಿ ಮೂವರು ಯೋಧರು ಹುತಾತ್ಮ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಗುರುವಾರ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದು, ಇನ್ನೂ ಮೂವರು ಗಾಯಗೊಂಡಿದ್ದಾರೆ ಎಂದು ಸೇನೆ ತಿಳಿಸಿದೆ.

    ಗುರುವಾರ ಮಧ್ಯಾಹ್ನ 3.45ಕ್ಕೆ ರಾಜೌರಿಯ ಪೂಂಚ್ ಪ್ರದೇಶದಲ್ಲಿ ಡೇರಾ ಕಿ ಗಲಿ ಮೂಲಕ ಹಾದು ಹೋಗುತ್ತಿದ್ದ ಎರಡು ಸೇನಾ ವಾಹನಗಳ ಮೇಲೆ ಭಯೋತ್ಪಾದಕರು ಹೊಂಚುದಾಳಿ ನಡೆಸಿದ ನಂತರ ಎನ್‌ಕೌಂಟರ್ ಪ್ರಾರಂಭವಾಗಿದೆ.

    ಡಿಕೆಜಿ ಪ್ರದೇಶ ಎಂದು ಕರೆಯಲ್ಪಡುವ ಡೇರಾ ಕಿ ಗಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೇನೆಯು ಬುಧವಾರ ರಾತ್ರಿಯಿಂದಲೇ ಕಾರ್ಯಾಚರಣೆ ನಡೆಸುತ್ತಿದೆ. ಗುರುವಾರ ರಾತ್ರಿ ವೇಳೆಯಲ್ಲಿಯೂ ಉಗ್ರರು ಹಾಗೂ ಸೇನೆಯ ನಡುವೆ ಗುಂಡಿನ ಚಕಮಕಿ ಮುಂದುವರಿದಿದೆ.

    “ನಿಖರವಾದ ಗುಪ್ತಚರ ಮಾಹಿತಿ ಆಧರಿಸಿ ಬುಧವಾರ ರಾತ್ರಿ ಡಿಕೆಜಿಯ ಸಾಮಾನ್ಯ ಪ್ರದೇಶದಲ್ಲಿ ಸೇನೆ ಹಾಗೂ ಪೊಲೀಸರು ಉಗ್ರರ ವಿರುದ್ಧ ಜಂಟಿ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. ಗುರುವಾರ ರಾತ್ರಿಯೂ ಎನ್‌ಕೌಂಟರ್ ಮುಂದುವರಿದಿದೆ” ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.

    ಕಳೆದ ತಿಂಗಳು, ರಾಜೌರಿಯ ಕಲಾಕೋಟೆಯಲ್ಲಿ ಸೇನೆ ಮತ್ತು ಅದರ ವಿಶೇಷ ಪಡೆಗಳು ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಇಬ್ಬರು ಕ್ಯಾಪ್ಟನ್‌ಗಳು ಸೇರಿದಂತೆ ಐವರು ಸೈನಿಕರು ಕಾರ್ಯಾಚರಣೆಯಲ್ಲಿ ಮೃತಪಟ್ಟಿದ್ದಾರೆ.

    ಈ ಪ್ರದೇಶವು ಭಯೋತ್ಪಾದಕರ ತಾಣವಾಗಿದ್ದು, ಕಳೆದ ಕೆಲವು ವರ್ಷಗಳಿಂದ ಸೇನೆಯ ಮೇಲೆ ಅನೇಕ ದಾಳಿಗಳನ್ನು ನಡೆಸಲಾಗಿದೆ.

    ಈ ವರ್ಷದ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ರಾಜೌರಿ-ಪೂಂಚ್ ಪ್ರದೇಶದಲ್ಲಿ ನಡೆದ ದಾಳಿಗಳಲ್ಲಿ 10 ಯೋಧರು ಹುತಾತ್ಮರಾಗಿದ್ದರು. ಈ ಪ್ರದೇಶದವು 2003 ಮತ್ತು 2021 ರ ನಡುವೆ ಬಹುತೇಕವಾಗಿ ಭಯೋತ್ಪಾದನೆಯಿಂದ ಮುಕ್ತವಾಗಿದ್ದರೂ ನಂತರದ ಅವಧಿಯಲ್ಲಿ ಆಗಾಗ್ಗೆ ಎನ್‌ಕೌಂಟರ್‌ಗಳು ನಡೆಯಲಾರಂಭಿಸಿವೆ.

    ಕಳೆದ ಎರಡು ವರ್ಷಗಳಲ್ಲಿ ಈ ಪ್ರದೇಶದಲ್ಲಿ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ 35 ಕ್ಕೂ ಹೆಚ್ಚು ಯೋಧರು ಹುತಾತ್ಮರಾಗಿದ್ದಾರೆ.

    ಕೆಲ ಸರ್ಕಾರಿ ಬ್ಯಾಂಕುಗಳ ಷೇರುಗಳು 2023ರಲ್ಲಿ ನೀಡಿದ ಲಾಭ ಶೇಕಡಾ 50ಕ್ಕೂ ಅಧಿಕ: ಹೊಸ ವರ್ಷದಲ್ಲಿ ಏನಾಗಬಹುದು?

    ಕರಡಿಯನ್ನು ಓಡಿಸಿದ ಗೂಳಿಯ ಗುಟುರು: ಚೇತರಿಸಿದ ಸೂಚ್ಯಂಕದಲ್ಲಿ ಲಾಭ ಮಾಡಿದ ಷೇರುಗಳು ಯಾವವು?

    ತಾಜ್​ ಮಹಲ್​ಗೊಂದು ಪ್ರತಿಸ್ಪರ್ಧಿ: ಉತ್ತರ ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ಮಸೀದಿ ಬಗ್ಗೆ ಬಿಜೆಪಿ ಮುಖಂಡ ನೀಡಿದ ವಿವರಗಳು ಕುತೂಹಲಕಾರಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts