ಶೃಂಗೇರಿ: ಮನೆಯಲ್ಲಿಯೇ ಮಹಿಳೆಯರು ತಯಾರಿಸಿದ ವಸ್ತುವನ್ನು ಮಾರಾಟ ಮಾಡಲು ಮಾಸಿಕ ಸಂಜೀವಿನಿ ಸಂತೆ ಉತ್ತಮ ಮಾರುಕಟ್ಟೆಯಾಗಿದೆ ಎಂದು ಮೆಣಸೆ ಗ್ರಾಪಂ ಅಧ್ಯಕ್ಷೆ ಸಂಧ್ಯಾ ಮರಿಯಪ್ಪನಾಯ್ಕ ಹೇಳಿದರು.
ಮೆಣಸೆ ಗ್ರಾಮ ಪಂಚಾಯಿತಿಯ ಹಾಲಂದೂರು ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಏರ್ಪಡಿಸಿದ್ದ ಮೆಣಸೆ ಪಂಚಾಯಿತಿ ಮಟ್ಟದ ಸಂಜೀವಿನಿ ಒಕ್ಕೂಟದ ಸಂತೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿ, ಮನೆಯಲ್ಲಿ ತಯಾರಿಸಿದ ಗುಣಮಟ್ಟದ ವಸ್ತುವಿಗೆ ಮಾರುಕಟ್ಟೆಯಲ್ಲಿ ಬೇಡಿಕೆ ಇದೆ. ಗ್ರಾಹಕರು ಸ್ಥಳೀಯ ವಸ್ತುವನ್ನು ಖರೀದಿಸಿ ಪ್ರೋತ್ಸಾಹ ನೀಡಬೇಕು. ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಈ ಮಾರುಕಟ್ಟೆ ಸಹಾಯಕವಾಗಿದೆ ಎಂದರು.
ಹಾಲಂದೂರು ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಎಂ.ಎಚ್.ನಟರಾಜ್ ಮಾತನಾಡಿ, ಸಂಘದ ಸದಸ್ಯರು ತಯಾರಿಸಿದ ಉತ್ಪನ್ನ ಮಾರಾಟ ಮಾಡುವುದಕ್ಕೆ ವ್ಯವಸ್ಥೆ ಮಾಡಲಾಗಿದ್ದು, ತಾಲೂಕು ಮಟ್ಟದ ಸಂತೆ ಏರ್ಪಡಿಸಲು ಅವಕಾಶ ಕಲ್ಪಿಸಲಾಗುತ್ತದೆ. ಸಂತೆಯಲ್ಲಿ ಮಾರಾಟ ಮಾಡಲು ಗ್ರಾಹಕರು ದೊರಕುವುದರಿಂದ ಉತ್ಪನ್ನ ಮಾಡುವವರಿಗೂ ಅನುಕೂಲವಾಗಲಿದೆ ಎಂದರು.
ಮೆಣಸೆ ಗ್ರಾಮ ಪಂಚಾಯಿತಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಸುಭಾಷಿಣಿ ಮಾಸಿಕ ಸಂತೆ ಉದ್ಘಾಟಿಸಿದರು. ಒಕ್ಕೂಟದ ಉಪಾಧ್ಯಕ್ಷೆ ಶಾಂತಾ, ಕಾರ್ಯದರ್ಶಿ ಪ್ರಮೀಳಾ, ಕೋಶಾಧ್ಯಕ್ಷೆ ಸುನೀತಾ, ಜಂಟಿ ಕಾರ್ಯದರ್ಶಿ ಭಾರತೀ, ಹಾಲಂದೂರು ಪಿಎಸಿಎಸ್ ಅಧ್ಯಕ್ಷ ರಾಜೇಶ್, ಸದಸ್ಯ ಎಂ.ಎನ್.ಚಂದ್ರಶೇಖರ್, ಗ್ರಾಪಂ ಉಪಾಧ್ಯಕ್ಷೆ ಭಾಗ್ಯಾ, ಪಿಡಿಒ ನಾಗಭೂಷಣ್, ಕಾರ್ಯಕ್ರಮ ವ್ಯವಸ್ಥಾಪಕ ಆದರ್ಶ, ಕೃಷಿಯೇತರ ತಾಲೂಕು ವ್ಯವಸ್ಥಾಪಕ ಚೈತ್ರಾ ಉಪಸ್ಥಿತರಿದ್ದರು.
ಸ್ಥಳೀಯ ವಸ್ತುವನ್ನು ಖರೀದಿಸಿ ಪ್ರೋತ್ಸಾಹಿಸಿ
Vastu Tips : ರಾತ್ರಿ ಮಲಗುವ ಮುನ್ನ ಈ ತಪ್ಪುಗಳನ್ನು ಮಾಡಬೇಡಿ!ಸಾಲದ ಸುಳಿಗೆ ಸಿಲುಕುತ್ತೀರಿ..!
Vastu Tips: ದೃಷ್ಟ ಚೆನ್ನಾಗಿದ್ದರೆ ಕೆಲವರು ರಾತ್ರೋರಾತ್ರಿ ಲಕ್ಷಾಧಿಪತಿಗಳಾಗುತ್ತಾರೆ. ಕೆಲವರು ಐಷಾರಾಮಿ ಜೀವನ ನಡೆಸಲು ಕಷ್ಟಪಡುತ್ತಾರೆ. ಅವರು…
Health Tips: ನೆಲದ ಮೇಲೆ ಕುಳಿತುಕೊಂಡು ತಿನ್ನಲು ಸಾಧ್ಯವಿಲ್ಲವೇ? ಆದ್ರೆ ಈ ಅದ್ಭುತ ಪ್ರಯೋಜನಗಳೇನು ಗೊತ್ತಾ?
Health Tips: ನಮ್ಮ ಹಿರಿಯರು ಊಟ ಮಾಡುವಾಗ ನೆಲದ ಮೇಲೆ ಕಾಲು ಮಡಚಿ ಕೂರುತ್ತಿದ್ದರು. ಆಧುನಿಕ ಕಾಲದಲ್ಲಿ…
Alcohol In Winter: ಚಳಿಯಲ್ಲಿ ಮದ್ಯ ಸೇವನೆ ಎಷ್ಟು ಅಪಾಯಕಾರಿ ಗೊತ್ತಾ?
Alcohol In Winter: ಚಳಿಗಾಲ ಆರಂಭವಾಗಿದೆ ಮತ್ತು ತಾಪಮಾನವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದಲ್ಲದೆ, ಜ್ವರ…