More

    ಗ್ರಾಮೀಣ ಕ್ರೀಡೆಗಳಿಗೆ ಪ್ರೋತ್ಸಾಹ ಅಗತ್ಯ

    ಸೊರಬ: ಗ್ರಾಮೀಣ ಭಾಗಗಳಲ್ಲಿ ಜನಪ್ರಿಯ ಕ್ರೀಡೆ ಕಬಡ್ಡಿಯನ್ನು ಆಯೋಜಿಸುವ ಜತೆಗೆ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ ಎಂದು ತಾಪಂ ಮಾಜಿ ಅಧ್ಯಕ್ಷ ಎಚ್.ಗಣಪತಿ ಹುಲ್ತಿಕೊಪ್ಪ ಹೇಳಿದರು.

    ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಬಸ್ತಿಕೊಪ್ಪ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಬಸ್ತಿಕೊಪ್ಪ ಗೆಳೆಯರ ಬಳಗದಿಂದ ಹಮ್ಮಿಕೊಂಡಿದ್ದ ಎರಡನೇ ವರ್ಷದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಯ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಗ್ರಾಮದ ಯುವಕರು ಒಗ್ಗಟ್ಟಿನಿಂದ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡಾಗ ಗ್ರಾಮವನ್ನು ಸಹ ಅಭಿವೃದ್ಧಿಪಡಿಸಲು ಸಾಧ್ಯ. ಸಚಿವ ಎಸ್.ಮಧು ಬಂಗಾರಪ್ಪ ಅವರ ನೇತೃತ್ವದಲ್ಲಿ ಬಸ್ತಿಕೊಪ್ಪ ಗ್ರಾಮಕ್ಕೆ ಮೂಲ ಸೌಲಭ್ಯಗಳನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಲಾಗುವುದು. ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಕ್ರೀಡಾಪಟುಗಳು ಕ್ರೀಡಾ ಭಾವನೆಯಿಂದ ಭಾಗವಹಿಸಿದಾಗ ಉತ್ತಮ ಪಟುವಾಗಲು ಸಾಧ್ಯ ಎಂದರು.
    ಬಾಳೆಹೊನ್ನೂರು, ತೆಲಗುಂದ್ಲಿ, ನೆಲ್ಲೂರು, ನೇರಳಗಿ ಗ್ರಾಮದ ತಂಡಗಳು ಕ್ರಮವಾಗಿ ಮೊದಲ ನಾಲ್ಕು ಸ್ಥಾನಗಳನ್ನು ಪಡೆದವು. ಗ್ರಾಮದ ಹಿರಿಯರಾದ ಕೆರಿಯಪ್ಪ ನಾಯ್ಕ, ಗ್ರಾಪಂ ಉಪಾಧ್ಯಕ್ಷ ಎಂ.ಬಿ.ರೇಣುಕಾಪ್ರಸಾದ್, ಸದಸ್ಯ ಎಂ.ಪಿ.ರತ್ನಾಕರ್, ತಾಪಂ ಮಾಜಿ ಸದಸ್ಯ ಎನ್.ಜಿ.ನಾಗರಾಜ್, ಕೆರಿಯಪ್ಪ ನಾಯ್ಕ, ಪ್ರದೀಪ್ ಗೌಡ, ಚಂದ್ರಪ್ಪ ಅಂಗಡಿ, ದಿನೇಶ್‌ನಾಯ್ಕ, ರವಿ ಚನ್ನಪಟ್ಟಣ, ಚಂದ್ರಪ್ಪ ಅಂಗಡಿ, ಅಜೀಜ್ ಅಹಮದ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts