More

    ರೈತ ಮಹಿಳೆಯರಿಗೆ ಪ್ರೋತ್ಸಾಹ

    ಬ್ಯಾಡಗಿ: 2023-24ನೇ ಸಾಲಿನಲ್ಲಿ ತಾಲೂಕು ಮಟ್ಟದಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ಮಹಿಳೆಯರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಸರ್ಕಾರದ ಆದೇಶದಂತೆ ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕಿ ಜಿ. ಶಾಂತಮಣಿ ತಿಳಿಸಿದ್ದಾರೆ.

    ಕೃಷಿಯಲ್ಲಿ ಆರ್ಥಿಕವಾಗಿ ಮುನ್ನಡೆ ಸಾಧಿಸಲು ಸರ್ಕಾರ ಹತ್ತಾರು ಯೋಜನೆ ಜಾರಿಗೊಳಿಸಿದೆ. ಅತಿವೃಷ್ಟಿ, ಅನಾವೃಷ್ಟಿ ಮಧ್ಯೆಯೂ ಕೆಲ ಮಹಿಳೆಯರು ವಿಶೇಷವಾಗಿ ಸಾಧನೆ ಮಾಡುತ್ತಿದ್ದಾರೆ.

    ಕೃಷಿಯೊಂದಿಗೆ ಹೈನುಗಾರಿಕೆ, ಹೂವು ಬೇಸಾಯ, ಕುರಿ, ಮೊಲ ಸಾಕಣೆ, ವಿವಿಧ ಕೃಷಿ ಪದ್ಧತಿ ಸೇರಿದಂತೆ ಭಿನ್ನ ಭಿನ್ನ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಇಂತಹ ಮಹಿಳೆಯರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಕರೆಯಲಾಗಿದೆ. ಅರ್ಜಿಯಲ್ಲಿ ನಮೂದಿಸಿದ ದಾಖಲಾತಿಗಳನ್ನು ಜು. 24 ಒಳಗಾಗಿ ತಾಲೂಕು ಕೃಷಿ ಇಲಾಖೆ ಕಾರ್ಯಾಲಯ ಅಥವಾ ರೈತ ಸಂಪರ್ಕ ಕೇಂದ್ರಕ್ಕೆ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts