ಶಿಕ್ಷಣದೊಂದಿಗೆ ಕ್ರೀಡೆಗೂ ಪ್ರೋತ್ಸಾಹ

throwball
ಥ್ರೋಬಾಲ್ ಟೂರ್ನಿಯನ್ನು ವೈದ್ಯ ಡಾ.ಎಂಎಸ್ ರಾವ್ ಉದ್ಘಾಟಿಸಿದರು. ಎಸ್‌ಡಿಎಂಸಿ ಅಧ್ಯಕ್ಷ ಶುಭದರ ಶೆಟ್ಟಿ, ಶ್ರೀನಿವಾಸ ಭಂಡಾರಿ, ಮುದ್ರಾಡಿ ಗ್ರಾ.ಪಂ ಉಪಾಧ್ಯಕ್ಷೆ ರಮ್ಯಕಾಂತಿ, ಗಣಪತಿ ಮೊದಲಾದವರಿದ್ದರು
Published on

ವಿಜಯವಾಣಿ ಸುದ್ದಿಜಾಲ ಹೆಬ್ರಿ

ಬದಲಾದ ಶಿಕ್ಷಣ ನೀತಿಯಂತೆ ಶಿಕ್ಷಣದ ಜತೆಗೆ ಕ್ರೀಡೆಗೂ ಹೆಚ್ಚು ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ವೈದ್ಯ ಡಾ.ಎಂ.ಎಸ್ ರಾವ್ ಹೇಳಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆ, ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಆಯೋಜನೆಯಲ್ಲಿ ಮುದ್ರಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಶುಕ್ರವಾರ ಪ್ರಾಥಮಿಕ ಶಾಲಾ ಮಟ್ಟದ ಬಾಲಕ ಬಾಲಕಿಯರ ಥ್ರೋಬಾಲ್ ಟೂರ್ನಿ ಉದ್ಘಾಟಿಸಿ ಮಾತನಾಡಿದರು.

ಕಾರ್ಕಳ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರವಿಚಂದ್ರ ಕಾರಂತ್ ಮಾತನಾಡಿದರು. ಎಸ್‌ಡಿಎಂಸಿ ಅಧ್ಯಕ್ಷ ಶುಭದರ ಶೆಟ್ಟಿ ಥ್ರೋಬಾಲ್ ಅಂಕಣ ಉದ್ಘಾಟಿಸಿದರು. ಮುದ್ರಾಡಿ ಗ್ರಾಪಂ ಅಧ್ಯಕ್ಷೆ ವಸಂತಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ರಮ್ಯಕಾಂತಿ, ಸದಸ್ಯರಾದ ಗಣಪತಿ ಎಂ, ಶಾಂತಾ ದಿನೇಶ್ ಪೂಜಾರಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕಾರ್ಕಳ ತಾಲೂಕು ಘಟಕ ಅಧ್ಯಕ್ಷ ರಮಾನಂದ ಶೆಟ್ಟಿ, ರಾಜ್ಯ ಸರ್ಕಾರಿ ನೌಕರರ ಹೆಬ್ರಿ ಘಟಕ ಅಧ್ಯಕ್ಷ ಹರೀಶ್ ಪೂಜಾರಿ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ಶ್ರೀನಿವಾಸ್ ಭಂಡಾರಿ ಸ್ವಾಗತಿಸಿದರು. ಸಿಆರ್‌ಪಿ ರಾಘವೇಂದ್ರ ಆಚಾರ್ಯ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net