ವಿಜಯಪುರ: ಒತ್ತುವರಿ ಮಾಡಿಕೊಂಡಿದ್ದ ಬೆಲೆ ಬಾಳುವ ಜಮೀನು ತೆರವುಗೊಳಿಸಿದ ಜಿಲ್ಲಾಡಳಿತ ಮರಳಿ ಸರ್ಕಾರದ ವಶಕ್ಕೆ ಮಾಡಿಕೊಂಡಿದೆ.
ತಿಕೋಟಾ ತಾಲೂಕಿನ ಇಟ್ಟಂಗಿಹಾಳ ಗ್ರಾಮದ ವ್ಯಾಪ್ತಿಯಲ್ಲಿ ಒತ್ತುವರಿಯಾಗಿದ್ದ ಅಂದಾಜು 20 ಕೋಟಿ ರೂ. ಮೌಲ್ಯದ ಸರ್ಕಾರಿ ಜಮೀನು ಶನಿವಾರ ಜಿಲ್ಲಾಧಿಕಾರಿ ಟಿ.ಭೂಬಾಲನ್ ನೇತೃತ್ವದಲ್ಲಿ ತೆರವುಗೊಳಿಸಲಾಯಿತು.
ಕೆಲವು ಖಾಸಗಿ ವ್ಯಕ್ತಿಗಳು ಈ ಜಮೀನು ಅತಿಕ್ರಮಣ ಮಾಡಿಕೊಂಡಿದ್ದರು. ಮೋಸದಿಂದ ಮಾಡಿ ಮಾರಾಟ ಮಾಡುತ್ತಿರುವ ಬಗ್ಗೆ ತಿಳಿದು ಬಂದ ಹಿನ್ನೆಲೆ ವಿಜಯಪುರ ಉಪವಿಭಾಗಾಧಿಕಾರಿಗಳು, ತಿಕೋಟಾ ತಹಸೀಲ್ದಾರ್ ಅವರನ್ನೊಳಗೊಂಡ ಜಿಲ್ಲಾಧಿಕಾರಿ ನೇತೃತ್ವದ ಅಧಿಕಾರಿಗಳ ತಂಡ ಪೊಲೀಸರ ಸಹಕಾರದೊಂದಿಗೆ ತೆರವುಗೊಳಿಸಿದರು.
ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡಿರುವವರ ಮೇಲೆ ಕಾನೂನು ರಿತ್ಯ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು. ಸರ್ಕಾರಿ ಭೂಮಿಯನ್ನು ಯಾರೂ ಅತಿಕ್ರಮಣ ಮಾಡಬಾರದು. ಸಾರ್ವಜನಿಕರು ಆಸ್ತಿ ಖರೀದಿಸುವಾಗ ಜಾಗ್ರತೆ ವಹಿಸಬೇಕೆಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ತಿಳಿಸಿದರು.