More

  ರಾಜಕಾಲುವೆ ಒತ್ತುವರಿ, ಹೈಕೋರ್ಟ್ ನೋಟಿಸ್ : ಯಲಹಂಕದ ಹೊಸಹಳ್ಳಿ ಗ್ರಾಮದ ಪ್ರಕರಣ

  ಬೆಂಗಳೂರು:  ಯಲಹಂಕ ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿನ ರಾಜಕಾಲುವೆ ಮತ್ತು ಸಾರ್ವಜನಿಕ ಮಾರ್ಗ ಒತ್ತುವರಿ ಮಾಡಿ ಬಡಾವಣೆ ಅಭಿವೃದ್ಧಿಪಡಿಸಿರುವ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

  ಕೆ.ಕೆಂಪಣ್ಣ ಸೇರಿ ಹೊಸಹಳ್ಳಿಯ ಗ್ರಾಮದ 21ಮಂದಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ, ನ್ಯಾಯಮೂರ್ತಿ ಆರ್.ದೇವದಾಸ್ ಅವರ ನೇತೃತ್ವದ ರಜಾಕಾಲದ ವಿಭಾಗೀಯ ಪೀಠ ವಿಚಾರಣೆಗೆ ನಡೆಸಿತು.

  ಕೆಲ ಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾಗಿರುವ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆ ಕಾರ್ಯದರ್ಶಿ, ಬೆಂಗಳೂರು ಜಿಲ್ಲಾಧಿಕಾರಿ, ಬೆಂಗಳೂರು ಉತ್ತರ ಉಪ ವಲಯದ ಉಪ ವಿಭಾಗಾಧಿಕಾರಿ, ಯಲಹಂಕ ತಹಸೀಲ್ದಾರ್, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಮತ್ತು ಮೆರ್ಸೆಸ್ ಸ್ಯಾಮಿಸ್ ಡ್ರೀಮ್ ಲ್ಯಾಂಡ್ ಪ್ರೈವೇಟ್ ಲಿಮಿಟೆಡ್‌ಗೆ ನೋಟಿಸ್ ಜಾರಿ ಮಾಡಿದೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts