More

    ಬಹಿರಂಗ ಪ್ರಚಾರ ಬುಧವಾರ ಸಂಜೆ ಅಂತ್ಯ; ಅಭ್ಯರ್ಥಿಗಳಿಂದ ಮನೆ ಮನೆಗೆ ತೆರಳಿ ಪ್ರಚಾರ

    ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಲೋಕಸಭೆ ಮೊದಲ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಬುಧವಾರ ಸಂಜೆ ಅಂತ್ಯಗೊಳ್ಳಲಿದೆ.

    ಬಳಿಕ ಅಭ್ಯರ್ಥಿಗಳು ಮನೆ ಮನೆಗೆ ತೆರಳು ಪ್ರಚಾರ ನಡೆಸಲಿದ್ದಾರೆ. ಕೊನೆಯ ಎರಡು ದಿನ ಕಸರತ್ತು ನಡೆಸಲಿದ್ದಾರೆ. ಮತ್ತೆ ಕೆಲವು ಸಂದರ್ಭಗಳಲ್ಲಿ ಮಸಲತ್ತು ನಡೆಸಿ ಮತದಾರರ ಮನಗೆಲ್ಲುವ ಕೆಲಸ ನಡೆಯಲಿದೆ.

    ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ಏ.26 ರಂದು ಮತದಾನ ನಡೆಯಲಿದೆ. ಈ ಹಂತದಲ್ಲಿ ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ ಕ್ಷೇತ್ರಗಳಲ್ಲಿ ಬುಧವಾರ ಸಂಜೆ 6ಕ್ಕೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ.

    247 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ

    ಬಹಿರಂಗ ಪ್ರಚಾರಕ್ಕೆ ತೆರೆ ಬೀಳುತ್ತಿದ್ದಂತೆ ಮತದಾರರಲ್ಲದ ಚುನಾವಣಾ ಪ್ರಚಾರಕ್ಕೆ ಆಗಮಿಸಿರುವ ವಿವಿಧ ರಾಜಕೀಯ ಪಕ್ಷಗಳ ನಾಯಕರು, ಮುಖಂಡರು ತೆರಳಬೇಕಿದೆ.
    ಮೊದಲ ಹಂತದ 14 ಕ್ಷೇತ್ರಗಳಲ್ಲಿ 226 ಪುರುಷ, 21 ಮಹಿಳಾ ಅಭ್ಯರ್ಥಿಗಳು ಸೇರಿದಂತೆ ಒಟ್ಟು 247 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.

    ಬಿಸಿಲು ಲೆಕ್ಕಸದೇ ಪ್ರಚಾರ ಕಾರ್ಯ

    ಚುನಾವಣೆಗೆ ಎರಡು ದಿನ ಮಾತ್ರ ಬಾಕಿ ಇರುವುದರಿಂದ ರಾಜಕೀಯ ಪಕ್ಷಗಳ ನಾಯಕರು, ಅಭ್ಯರ್ಥಿಗಳು, ಮುಖಂಡರು, ಕಾರ್ಯಕರ್ತರು ಬೇಸಿಗೆ ಬಿಸಿಲನ್ನು ಲೆಕ್ಕಿಸದೆ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ.
    ಬಿಜೆಪಿ, ಕಾಂಗ್ರೆಸ್ ನಾಯಕರ ನಡುವೆ ವಾಗ್ವಾದ, ಆರೋಪ-ಪ್ರತ್ಯಾರೋಪ, ಟೀಕೆ-ಟಿಪ್ಪಣಿ ತಾರಕಕ್ಕೇರಿದೆ. ಪ್ರಚಾರದ ಅಬ್ಬರ ಮುಗಿಲು ಮುಟ್ಟಿದೆ. ಹೀಗಾಗಿ 14 ಕ್ಷೇತ್ರಗಳಲ್ಲೂ ಪ್ರಚಾರದ ಕಾವು ಏರಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts