More

    ಆಸ್ಪತ್ರೆ ಸಮಸ್ಯೆ ಬಗೆಹರಿಸಲು ಕ್ರಮ

    ತಿ.ನರಸೀಪುರ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸುವುದಾಗಿ ಜಿಲ್ಲಾ ಆರೋಗ್ಯ ಅಧಿಕಾರಿ ಪಿ.ಸಿ.ಕುಮಾರಸ್ವಾಮಿ ಭರವಸೆ ನೀಡಿದರು.

    ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಮುಂಭಾಗ ಮೂರು ದಿನಗಳಿಂದ ದಸಂಸ ವತಿಯಿಂದ ನಡೆಯುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಗುರುವಾರ ಭೇಟಿ ನೀಡಿ ಮನವಿ ಪತ್ರ ಸ್ವೀಕರಿಸಿ ಮಾತನಾಡಿದರು.

    ಆಸ್ಪತ್ರೆಯಲ್ಲಿನ ಸಮಸ್ಯೆಗಳನ್ನು ಪರಿಶೀಲಿಸಿದ್ದು, ತುರ್ತಾಗಿ ಆಗಬೇಕಾಗಿರುವ ಕೆಲಸಗಳ ಬಗ್ಗೆ ಕ್ರಮ ವಹಿಸುವಂತೆ ಆಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.

    ಸಾಕಷ್ಟು ಸಮಸ್ಯೆಗಳನ್ನು ಜಿಪಂ ಹಾಗೂ ಜಿಲ್ಲಾ ಮಟ್ಟದಲ್ಲೇ ಬಗೆಹರಿಸಲು ಪ್ರಯತ್ನಿಸುವುದಾಗಿ ತಿಳಿಸಿದ ಅವರು, ಉಳಿದ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ಪ್ರಸ್ತಾವನೆ ಸಲ್ಲಿಸಿ ಬಗೆಹರಿಸಲಾಗುವುದೆಂದರು.

    ಪ್ರಸೂತಿ ತಜ್ಞರ ಬಗ್ಗೆ ಸಾಕಷ್ಟು ದೂರುಗಳು ಕೇಳಿ ಬಂದಿವೆ. ಈ ಬಗ್ಗೆ ಅವರಿಗೆ ನೋಟಿಸ್ ನೀಡಿ ಉತ್ತರ ಪಡೆದುಕೊಳ್ಳುವಂತೆ ಆಡಳಿತ ವೈದ್ಯಾಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.

    ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಆಲಗೂಡು ಡಾ.ಎಸ್.ಚಂದ್ರಶೇಖರ್ ಮಾತನಾಡಿ, ಪ್ರಸೂತಿ ತಜ್ಞ ವೈದ್ಯರನ್ನು ಕೂಡಲೇ ವರ್ಗಾವಣೆ ಮಾಡಬೇಕು ಹಾಗೂ ಅವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು. ನಿಮ್ಮ ಭರವಸೆ ಮೇಲೆ ನಾವು ಪ್ರತಿಭಟನೆ ಹಿಂಪಡೆಯುತ್ತಿದ್ದೇವೆ. ನಮ್ಮ ಮನವಿ ಪತ್ರದಲ್ಲಿರುವ ಬೇಡಿಕೆಗಳನ್ನು ಶೀಘ್ರವಾಗಿ ಈಡೇರಿಸಬೇಕೆಂದು ಆಗ್ರಹಿಸಿದರು.

    ಬಳಿಕ ಆಸ್ಪತ್ರೆಯ ಶುಚಿತ್ವ ಹಾಗೂ ಔಷಧ ಕೊಠಡಿಗಳನ್ನು ಪರಿಶೀಲಿಸಿ ಮಾಹಿತಿ ಪಡೆದ ಪಿ.ಸಿ.ಕುಮಾರಸ್ವಾಮಿ, ಆಡಳಿತ ಅಧಿಕಾರಿಗಳ ಕಚೇರಿಯಲ್ಲಿ ವೈದ್ಯರ ಸಭೆ ನಡೆಸಿದರು. ಸಾರ್ವಜನಿಕರಿಂದ ದೂರುಗಳು ಬಾರದಂತೆ ಕರ್ತವ್ಯ ನಿರ್ವಹಿಸುವಂತೆ ಸೂಚಿಸಿದರು.

    ತಾಲೂಕು ಆರೋಗ್ಯ ಅಧಿಕಾರಿ ಡಾ.ರವಿಕುಮಾರ್, ಸಾರ್ವಜನಿಕ ಆಸ್ಪತ್ರೆಯ ಆಡಳಿತ ಅಧಿಕಾರಿ ಡಾ. ಜಗನ್ನಾಥ್, ದಸಂಸದ ತಾಲೂಕು ಸಂಚಾಲಕ ಕೆಂಪಯ್ಯನ ಹುಂಡಿ ರಾಜು, ಆಡಳಿತ ವೈದ್ಯಾಧಿಕಾರಿ ಡಾ.ಜಗನ್ನಾಥ್, ಆರೋಗ್ಯ ಅಧಿಕಾರಿ ಡಾ.ರವಿಕುಮಾರ್ ಇದ್ದರು.

    ಪ್ರತಿಭಟನೆ ಅಂತ್ಯ: ಜಿಲ್ಲಾ ಆರೋಗ್ಯ ಅಧಿಕಾರಿಯ ಭರವಸೆ ಹಿನ್ನೆಲೆಯಲ್ಲಿ ದಸಂಸ ಕಾರ್ಯಕರ್ತರು ಪ್ರತಿಭಟನೆ ಅಂತ್ಯಗೊಳಿಸಿದರು. ಕನ್ನನಾಯಕನಹಳ್ಳಿ ಮರಿಸ್ವಾಮಿ, ಎಲ್. ರಾಜಶೇಖರ್, ಮನೋಜ್ ಕುಮಾರ್, ಚೌಹಳ್ಳಿ ಪರಶುರಾಮ್, ಸೋಮನಾಥಪುರ ಗೋವಿಂದರಾಜು, ಎಡದೊರೆ ಚಂದ್ರಪ್ಪ, ಕೊಳತ್ತೂರು ಪ್ರಭಾಕರ್, ಮಾರನಪುರ ಕೇಶವಮೂರ್ತಿ, ಜಯಣ್ಣ, ಶಿವನಂಜು, ರವಿಕಾಂತ್, ಮಹದೇವಸ್ವಾಮಿ, ಉಮೇಶ್, ಮಂಚಯ್ಯ, ಸ್ವಾಮಿ, ಶಿವನಂಜು ಮತ್ತಿತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts