ಬಹುಕೋಟಿ ಪಡಿತರ ಹಗರಣ; ಪಶ್ಚಿಮ ಬಂಗಾಳದ ಸಚಿವ ಜ್ಯೋತಿಪ್ರಿಯ ಮಲ್ಲಿಕ್​ನನ್ನು ವಶಕ್ಕೆ ಪಡೆದ ED

Jyotipriya Mallick
Published on

ಕಲ್ಕತ್ತಾ: ಪಡಿತರ ವಿತರಣೆಯಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಅಕ್ರಮಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಅರಣ್ಯ ಸಚಿವ ಜ್ಯೋತಿಪ್ರಿಯ ಮಲ್ಲಿಕ್​ ಅವರನ್ನು ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಶುಕ್ರವಾರ ಬಂಧಿಸಿದ್ದಾರೆ.

ಶುಕ್ರವಾರ ಬೆಳಗ್ಗೆ ಕಲ್ಕತ್ತಾದ ಸಾಲ್ಟ್​ ಲೇಕ್​ನಲ್ಲಿರುವ ಅವರ ನಿವಾಸದ ಮೇಲೆ ದಾಳಿ ಮಾಡಿದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದ ಬಳಿಕ ಅವರನ್ನು ವಶಕ್ಕೆ ಪಡೆದಿದ್ದಾರೆ.

ತಮ್ಮನ್ನು ಬಂಧಿಸಿರುವ ಕುರಿತು ಪ್ರತಿಕ್ರಿಯಿಸಿರುವ ಸಚಿವ ಜ್ಯೋತಿಪ್ರಿಯ ಮಲ್ಲಿಕ್ ನನ್ನ ವಿರುದ್ಧ ಸಂಚು ಹೆಣೆಯಲಾಗಿದ್ದು, ಇದು ದ್ವೇಷ ರಾಜಕಾರಣಕ್ಕೆ ಸ್ಪಷ್ಟ ಉದಾಹರಣೆ ಎಂದು ಕಿಡಿಕಾರಿದ್ದಾರೆ.

ಬಹುಕೋಟಿ ಅಕ್ರಮಕ್ಕೆ ಸಂಬಂಧಿಸಿದಂತೆ ಈ ಹಿಂದೆ ಆಹಾರ ಸಚಿವರಾಗಿದ್ದ ಜ್ಯೋತಿಪ್ರಿಯೊ ಮಲ್ಲಿಕ್ ಅವರ ಮಾಜಿ ಆಪ್ತ ಸಹಾಯಕ ಸೇರಿದಂತೆ 8 ಮಂದಿಯ ಮನೆಗಳ ಮೇಲೆ ದಾಳಿ ಮಾಡಲಾಗಿತ್ತು. ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಟಿಎಂಸಿಯೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ವ್ಯಕ್ತಿಯೊಬ್ಬನನ್ನು ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಈಗಾಗಲೇ ವಶಕ್ಕೆ ಪಡೆದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net