ವ್ಯವಸಾಯದ ಜತೆ ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳಿರಿ

ಹನಗೋಡು: ರೈತರು ವ್ಯವಸಾಯದ ಜತೆ ಉಪ ಕಸುಬನ್ನಾಗಿ ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಲ್ಲಿ ಆರ್ಥಿಕವಾಗಿ ಅಭಿವೃದ್ಧಿಹೊಂದಲು ಸಾಧ್ಯ ಎಂದು ಶಾಸಕ ಜಿ.ಡಿ. ಹರೀಶ್ ಗೌಡ ಹೇಳಿದರು.

ಹನಗೋಡು ಹೋಬಳಿಯ ಕೋಣನಹೊಸಹಳ್ಳಿಯಲ್ಲಿ ನೂತನ ಹಾಲು ಉತ್ಪಾದಕರ ಸಹಕಾರ ಸಂಘವನ್ನು ಉದ್ಘಾಟಿಸಿ ಮಾತನಾಡಿ, ರೈತಾಪಿ ವರ್ಗ ಇಂದು ಬರೀ ವ್ಯವಸಾಯವನ್ನೇ ನಂಬಿ ಜೀವನ ಸಾಗಿಸುವುದು ಕಷ್ಟಕರವಾಗಿದ್ದು, ಆರ್ಥಿಕವಾಗಿ ಸದೃಢರಾಗಲು ಇತರೆ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಸಹಕಾರ ಸಂಘಗಳಲ್ಲಿ ಎಲ್ಲಾ ಸಮುದಾಯದವರು ಸಹಬಾಳ್ವೆಯಿಂದ ತೊಡಗಿಸಿಕೊಳ್ಳಬೇಕು. ರಾಜಕೀಯ ಒಳನುಸುಳದಂತೆ ಎಚ್ಚರ ವಹಿಸಬೇಕು ಎಂದು ಹೇಳಿದರು. ಹುಣಸೂರು ತಾಲೂಕಿನಲ್ಲಿ 212ಸಂಘಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಪ್ರತಿ ಗ್ರಾಮದಲ್ಲೂ ಹಾಲು ಶೇಖರಣೆ ಕೇಂದ್ರ ಸ್ಥಾಪನೆಯಾಗಬೇಕು. ಗ್ರಾಮ ಮಟ್ಟದಲ್ಲಿ ಸಂಘ ಸಂಸ್ಥೆಗಳು ಬಲಿಷ್ಠ ಗೊಳ್ಳಬೇಕು ಎಂದು ಸಲಹೆ ನೀಡಿದರು.

ರಾಜ್ಯ ಸರ್ಕಾರ ಅಭಿವೃದ್ಧಿ ಕಾರ್ಯಗಳಿಗೆ ಯಾವುದೇ ಅನುದಾನ ಬಿಡುಗಡೆ ಮಾಡದೆ ಕೇವಲ ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲಿ ನಿರತವಾಗಿದೆ. ಗ್ರಾಮಸ್ಥರ ಬೇಡಿಕೆಗೆ ಅನುಗುಣವಾಗಿ ಮುಂದಿನ ದಿನಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.
ಮೈಮುಲ್ ನಿರ್ದೇಶಕ ಕೆ.ಎಸ್.ಕುಮಾರ್ ಮಾತನಾಡಿ, ಸರ್ಕಾರ ಹಾಲು ಉತ್ಪಾದಕರಿಗೆ ಹಲವು ಉತ್ತಮ ಯೋಜನೆಗಳನ್ನು ಜಾರಿಗೆ ತಂದಿದ್ದು, ಸದುಪಯೋಗ ಪಡಿಸಿಕೊಳ್ಳುವಂತೆ ಕರೆ ನೀಡಿದರು.

ಮೈಮುಲ್ ನಿರ್ದೇಶಕಿ ಶಿವಗಾಮಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕಟ್ಟನಾಯ್ಕ, ಗಾವಡಗೆರೆ ದೇವರಾಜು, ಸಂಘದ ಅಧ್ಯಕ್ಷ ಜಗದೀಶ್, ಎಪಿಎಂಸಿ ಮಾಜಿ ಅಧ್ಯಕ್ಷ ಸುಭಾಷ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಭರತವಾಡಿ ವೆಂಕಟೇಶ್, ಮೈಮುಲ್ ಉಪವ್ಯವಸ್ಥಪಾಕ ಗೌತಮ್, ವಿಸ್ತಿರಣಾಧಿಕಾರಿ ವಸಂತ್, ರಾಮಕೃಷ್ಣ, ಸ್ವಾಮಿನಾಯ್ಕ, ಹಲಗನಾಯ್ಕ, ಜಯಮ್ಮ ಭಾಗ್ಯಲಕ್ಷ್ಮೀ, ದೇವನಾಯ್ಕ, ರಮೇಶ್, ನಾಗರಾಜು, ಸುಬ್ರಮಣ್ಯ, ಲೋಕೇಶ್ ಇತರರು ಇದ್ದರು.

Share This Article

Skin care: ಕಣ್ಣುಗಳ ಕೆಳಗಿರುವ ಚರ್ಮ ಸುಕ್ಕುಗಟ್ಟಿದೆಯೇ? ಹೀಗೆ ಮಾಡಿ..

ಕಣ್ಣುಗಳು(Skin care) ಸೂಕ್ಷ್ಮ ಅಂಗಗಳಾಗಿದ್ದು, ಅವುಗಳ ಕೆಳಗಿರುವ ಚರ್ಮವು ಸಹ ಸೂಕ್ಷ್ಮವಾಗಿರುತ್ತದೆ. ಬಿಸಿಲು, ಪೌಷ್ಠಿಕ ಆಹಾರದ…

Health Tips : ಮೆಟ್ಟಿಲು ಹತ್ತುವಾಗ ಸುಸ್ತಾಗುತ್ತದಾ..! ಈ ಸಲಹೆಗಳನ್ನು ಅನುಸರಿಸಿ

ಬೆಂಗಳೂರು: ಮೆಟ್ಟಿಲು ಹತ್ತುವಾಗ ಉಸಿರಾಟದ ತೊಂದರೆ ಸಾಮಾನ್ಯ. ಈ ಸಮಸ್ಯೆಯು ವಯಸ್ಸಾದಂತೆ ಹೆಚ್ಚಾಗುತ್ತಿದೆ, ಆದರೆ ಇತ್ತೀಚಿನ…