ಹೆಚ್ಚು ಸಮಯ ಕ್ರೀಡಾ ಚಟುವಟಿಕೆಯಲ್ಲಿ ಭಾಗಿ

weight lift
ಕುಂದಾಪುರ ಕೋಡಿಯ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನ ಕ್ರೀಡಾ ಘಟಕ ವತಿಯಿಂದ ವಾರ್ಷಿಕ ಕ್ರೀಡಾ ಚಟುವಟಿಕೆಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು
Published on

ಕುಂದಾಪುರ: ಪ್ರತಿಯೊಬ್ಬ ವಿದ್ಯಾರ್ಥಿ ಮೊಬೈಲ್ ಬಳಕೆಯಿಂದ ದೂರ ಸರಿದು ಹೆಚ್ಚು ಸಮಯವನ್ನು ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ರಾಷ್ಟ್ರಧ್ವಜವನ್ನು ರಾಷ್ಟ್ರಗೀತೆಯೊಂದಿಗೆ ತನ್ನ ಹೆಗಲಿನ ಮೇಲೆ ಹೊದಿಸಿಕೊಂಡು ವಿಜಯ ವೇದಿಕೆ ಏರಬೇಕು ಎಂದು ಪವರ್‌ಲಿಫ್ಟಿಂಗ್ ಕ್ರೀಡಾಪಟು ಸತೀಶ್ ಖಾರ್ವಿ ಹೇಳಿದರು.

ಕುಂದಾಪುರ ಕೋಡಿಯ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನ ಕ್ರೀಡಾ ಘಟಕ ವತಿಯಿಂದ ವಾರ್ಷಿಕ ಕ್ರೀಡಾ ಚಟುವಟಿಕೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಗುರುವಾರ ಮಾತನಾಡಿದರು.

ಪ್ರಾಂಶುಪಾಲೆ ಶಬೀನಾ ಎಚ್. ಅಧ್ಯಕ್ಷತೆ ವಹಿಸಿದ್ದರು. ದೈಹಿಕ ಶಿಕ್ಷಣ ನಿರ್ದೇಶಕ ಸೌರಭ ಹಾಗೂ ವಿದ್ಯಾರ್ಥಿ ಕ್ರೀಡಾ ಮುಖಂಡ ಮನಾಜ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಅನಿಷಾ ಸ್ವಾಗತಿಸಿದರು. ರಿದಾ ಕಾರ್ಯಕ್ರಮ ನಿರೂಪಿಸಿದರು. ಮುಝಮ್ಮಿಲ್ ಅತಿಥಿಗಳನ್ನು ಪರಿಚಯಿಸಿದರು. ಬುಶ್ರಾ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net