More

    ದೇಶದಲ್ಲೇ ಪಶ್ಚಿಮ ಬಂಗಾಳವು ಮಹಿಳೆಯರಿಗೆ ಅತ್ಯಂತ ಸುರಕ್ಷಿತ ರಾಜ್ಯ: ಮಮತಾ ಬ್ಯಾನರ್ಜಿ

    ಕಲ್ಕತ್ತಾ: ಇಡೀ ದೇಶದಲ್ಲೇ ಪಶ್ಚಿಮ ಬಂಗಾಳ ಮಹಿಳೆಯರಿಗೆ ಅತಿ ಸುರಕ್ಷಿತ ರಾಜ್ಯ. ಸಂದೇಶಖಾಲಿ ಪ್ರಕರಣ ಬಿಜೆಪಿ ನಮ್ಮ ಸರ್ಕಾರದ ವಿರುದ್ಧ ಹಬ್ಬಿಸುತ್ತಿರುವ ಸುಳ್ಳು ಸುದ್ದಿ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

    ಕಲ್ಕತ್ತಾದಲ್ಲಿ ಸಾರ್ವಜನಿಕ ಸಮಾವೇಶವನ್ನುದ್ಧೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, ಸಂದೇಶಖಾಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಬಿಜೆಪಿ ನಾಯಕರು ಪಶ್ಚಿಮ ಬಂಗಾಳದಲ್ಲಿ ಮಹಿಳೆಯರ ಸುರಕ್ಷತೆಯ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆದಾಗ ಯಾಕೆ ಮೌನ ವಹಿಸುತ್ತಾರೆ. ದೇಶದಲ್ಲೇ ಪಶ್ಚಿಮ ಬಂಗಾಳವು ಮಹಿಳೆಯರಿಗೆ ಅತ್ಯಂತ ಸುರಕ್ಷಿತ ರಾಜ್ಯ ಎಂದು ಹೇಳಿದ್ದಾರೆ.

    ಇದನ್ನೂ ಓದಿ: 100ನೇ ಟೆಸ್ಟ್​ ಪಂದ್ಯದಲ್ಲಿ ಮತ್ತೊಂದು ದಾಖಲೆ ಬರೆದ ಆರ್. ಅಶ್ವಿನ್

    ಬಿಜೆಪಿಯವರು ಪಶ್ಚಿಮ ಬಂಗಾಳಕ್ಕೆ 400ಕ್ಕೂ ಅಧಿಕ ತಂಡಗಳನ್ನು ಕಳುಹಿಸಿದ್ದಾರೆ. ಆದರೆ, ಇದೇ ರೀತಿ ಮಣಿಪುರಕ್ಕೆ ಯಾಕೆ ಕಳುಹಿಸಲಿಲ್ಲ. ಅಲ್ಲಿಯೂ ಕೂಡ ಮಹಿಳೆಯರ ಮೇಲೆ ದೌರ್ಜನ್ಯ ಎಸಗಲಾಗಿತ್ತು. ಆದರೆ, ಅಲ್ಲಿಗೆ ತಂಡವನ್ನು ಕಳುಹಿಸದ ಬಿಜೆಪಿ ನಮ್ಮ ಮೇಲೆ ಆರೋಪ ಮಾಡುವುದು ಸರಿಯಲ್ಲ. ನಾವು ಅವರ ಒಡೆದು ಆಳುವ ನೀತಿಯನ್ನು ವಿರೋಧಿಸಿದ್ದರಿಂದ ನಮ್ಮ ಬಗ್ಗೆ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

    ಕೆಲ ದಿನಗಳ ಹಿಂದೆ ನ್ಯಾಯಮೂರ್ತಿ ಸ್ಥಾನ ತೊರೆದು ಬಿಜೆಪಿ ಸೇರ್ಪಡೆಯಾದ ಅಭಿಜಿತ್​ ಗಂಗೋಪಾಧ್ಯಾಯ ಕುರಿತು ಮಾತನಾಡಿದ ಮಮತಾ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನೀವು ಎಲ್ಲಿಂದ ಸ್ಪರ್ಧಿಸಿದರೂ ನಿಮಗೆ ಸೋಲು ಕಟ್ಟಿಟ್ಟ ಬುತ್ತಿ. ನಿಮ್ಮ ತೀರ್ಪುಗಳ ಮೂಲಕ ಸಾವಿರಾರು ಯುವಕರ ಉದ್ಯೋಗಗಳನ್ನು ಕಸಿದುಕೊಂಡಿದ್ದೀರಾ. ಜೊತೆಗೆ ಯುವಕರು ಯಾವುದೇ ಕಾರಣಕ್ಕೂ ನಿಮ್ಮನ್ನು ಕ್ಷಮಿಸುವುದಿಲ್ಲ. ನಿಮ್ಮ ಎಲ್ಲಾ ತೀರ್ಪುಗಳು ಪ್ರಶ್ನಾರ್ಹವಾಗಿವೆ. ನಿಮ್ಮ ಸೋಲನ್ನು ನಾವು ಖಚಿತಪಡಿಸುತ್ತೇವೆ ಎಂದು ಮಮತಾ ಬ್ಯಾನರ್ಜಿ ಎಚ್ಚರಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts