ಬಿಎಚ್​ಇಎಲ್​ನಲ್ಲಿ ಇಂಜಿನಿಯರ್​, ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ: ಅರ್ಜಿ ಸಲ್ಲಿಕೆಗೆ ನ.21 ಕೊನೇ ದಿನ

udyoga-BHEL
Published on

ಬೆಂಗಳೂರು: ಕೇಂದ್ರ ಸರ್ಕಾರದ ಸ್ವಾಮ್ಯಕ್ಕೆ ಒಳಪಟ್ಟಿರುವ ದೇಶದ ಅತಿ ದೊಡ್ಡ ಇಂಜಿನಿಯರಿಂಗ್​ ಸಂಸ್ಥೆಗಳಲ್ಲಿ ಒಂದಾಗಿರುವ ಭಾರತ್​ ಹೆವಿ ಎಲೆಕ್ಟ್ರಿಕಲ್ಸ್​ ಲಿಮಿಟೆಡ್​(ಬಿಎಚ್​ಇಎಲ್​) 83ಕ್ಕೂ ಹೆಚ್ಚು ದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿದೆ. ಸಾವಿರಾರು ಉದ್ಯೋಗಿಗಳನ್ನು ಹೊಂದಿರುವ ಬಿಎಚ್​ಇಎಲ್​ನಲ್ಲಿ ಅನುಭವಿ ಇಂಜಿನಿಯರ್​ ಮತ್ತು ಮೇಲ್ವಿಚಾರಕ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದ್ದು, ಇಂಜಿನಿಯರ್​ ಮತ್ತು ಡಿಪ್ಲೊಮಾ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಲು ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ: ಇಂಜಿನಿಯರ್​-12, ಮೇಲ್ವಿಚಾರಕರು- 20.

ಶೈಕ್ಷಣಿಕ ಅರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ ಅಭ್ಯರ್ಥಿಗಳು ಡಿಪ್ಲೊಮಾ/ಬಿಇ/ಬಿಟೆಕ್​ ಅಥವಾ ತತ್ಸಮಾನ ಪದವಿ ಹೊಂದಿರಬೇಕು.

ವಯೋಮಿತಿ: ಅರ್ಜಿ ಸಲ್ಲಿಸುವ ದಿನಾಂಕಕ್ಕೆ ಅನ್ವಯವಾಗುವಂತೆ ವಯೋಮಿತಿ 45 ವರ್ಷದ ಒಳಗಿರಬೇಕು.

ಅರ್ಜಿ ಸಲ್ಲಿಕೆ ಮತ್ತು ಆಯ್ಕೆ ವಿಧಾನ: ಎಲ್ಲ ಅಭ್ಯರ್ಥಿಗಳು (ಎಸ್​ ಸಿ/ ಎಸ್​ಟಿ/ಪಿಡಬ್ಲ್ಯುಬಿಡಿ ಅಭ್ಯರ್ಥಿಗಳನ್ನು ಹೊರತುಪಡಿಸಿ) 200 ರೂ. ಶುಲ್ಕವನ್ನು ಕ್ಯುಆರ್​ ಕೋಡ್​ ಮೂಲಕ ಪಾವತಿಸಬೇಕಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಎಚ್​ಇಎಲ್​ ಅಧಿಕೃತ ವೆಬ್​ಸೈಟ್​ಗೆ ಹೋಗಿ ಅಧಿಸೂಚನೆಯಲ್ಲಿ ನೀಡಲಾದ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸತಕ್ಕದ್ದು. ಶಾರ್ಟ್​ಲಿಸ್ಟ್​ ಮಾಡಿದ ಅಭ್ಯರ್ಥಿಗಳನ್ನು ವೈಯಕ್ತಿಕ ಸಂದರ್ಶನ ಹಾಗೂ ಮೆರಿಟ್​ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ವೇತನ: ಇಂಜಿನಿಯರ್​ ಹುದ್ದೆಗೆ ಪ್ರತಿ ಮಾಸಿಕ 78000/ ರೂ. ಹಾಗೂ ಮೇಲ್ವಿಚಾರಕರ ಹುದ್ದೆಗೆ 43550 ರೂ. ಮಾಸಿಕ ವೇತನ ನಿಗದಿಪಡಿಸಲಾಗಿದೆ.

ಅರ್ಹತಾ ಮಾನದಂಡಗಳು: ಅರ್ಹತಾ ಮಾನದಂಡಗಳನ್ನು ಪೂರೈಸದ ಅಥವಾ ಅಪೂರ್ಣವಾಗಿರುವ ಅರ್ಜಿಗಳನ್ನು ಸಂಪೂರ್ಣವಾಗಿ ತಿರಸ್ಕರಿಸಲಾಗುತ್ತದೆ. ಸಂದರ್ಶನದ ಸಮಯದಲ್ಲಿ ಪರಿಶೀಲನೆಗಾಗಿ ಮೂಲ ದಾಖಲೆಗಳ ಅಗತ್ಯವಿದೆ. ಸಂಸ್ಥೆಯ ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ. ಭಾರತೀಯ ಪ್ರಜೆಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.

ಅರ್ಜಿ ಸಲ್ಲಿಸಲು ಕೊನೇ ದಿನ: 21.11.2022

ಅಧಿಸೂಚನೆಗೆ: http://bit.ly/3g154Fo

ಮಾಹಿತಿಗಾಗಿ: https://www.bhel.com/

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net