More

    ಇಂಜಿನಿಯರ್ ನಿವಾಸದ ಮೇಲೆ ಎಸಿಬಿ ದಾಳಿ

    ಬೆಳಗಾವಿ: ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇಲೆ ಲೋಕೋಪಯೋಗಿ ಇಲಾಖೆಯ ಬೆಳಗಾವಿ ಉಪ ವಿಭಾಗದ ಸಹಾಯಕ ಇಂಜಿನಿಯರ್ ನಿವಾಸದ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿ, ಮಹತ್ವದ ದಾಖಲೆ ವಶಪಡಿಸಿಕೊಂಡಿದ್ದಾರೆ. ಸಹಾ ಯಕ ಇಂಜಿನಿಯರ್ ಮನೋಜ ಸುರೇಶ ಕವಳೇಕರ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಕುರಿತು ಡಿ. 17ರಂದು ಎಸಿಬಿ ಠಾಣೆಯಲ್ಲಿ ದೂರು ದಾಖಲಾಗಿತ್ತು.

    ಆ ಹಿನ್ನೆಲೆಯಲ್ಲಿ ಕವಳೇಕರ ಒಡೆತನಕ್ಕೆ ಸೇರಿದ ಅಯೋಧ್ಯಾನಗರ, ಮಹಾದ್ವಾರ ರಸ್ತೆಯ ಮಲ್ಹಾರ್ ರೆಸಿಡೆನ್ಸಿ, ಖಾನಾಪುರ ತಾಲೂಕಿನ ಸಂಗರಗಾಳಿ ಗ್ರಾಮದಲ್ಲಿರುವ ಫಾರ್ಮ್ ಹೌಸ್ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ದಾಖಲೆ ವಶಕ್ಕೆ ಪಡೆದುಕೊಳ್ಳಲಾಗಿದೆ. ಅಕ್ರಮ ಆಸ್ತಿಗೆ ಸಂಬಂಧಪಟ್ಟ ದಾಖಲೆಗಳ ಮೂಲದ ಬಗ್ಗೆ ಮತ್ತು ದಾಖಲೆಗಳ ಪರಿಶೀಲನೆ ಮುಂದುವರಿದಿದೆ ಎಂದು ಎಸಿಬಿ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts