More

    ಎಲೆಕ್ಟ್ರಿಕ್ ಸ್ಕೂಟರ್ ಟೆಸ್ಟ್ ಡ್ರೈವ್‌ನಲ್ಲಿ ಇಂಜಿನಿಯರ್ ವಿದ್ಯಾರ್ಥಿ ಸಾವು; ಕಾರಣ ಏನು ಗೊತ್ತಾ..!

    ಬೆಂಗಳೂರು: ಎಲೆಕ್ಟ್ರಿಕ್ ಸ್ಕೂಟರ್ ಟೆಸ್ಟ್ ಡ್ರೈವ್ ಮಾಡುವಾಗ ನಿಯಂತ್ರಣ ತಪ್ಪಿ ರಸ್ತೆಬದಿಯ ಮರಕ್ಕೆ ಡಿಕ್ಕಿ ಹೊಡೆದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.

    ಕೋರಮಂಗಲದ ಧ್ಯಾನ್‌ಶ್ಯಾಮ್ (20) ಮೃತ ಸವಾರ. ಭಾನುವಾರ ಮಧ್ಯಾಹ್ನ 2.40ರಲ್ಲಿ ಕೋರಮಂಗಲದ ಒಳವರ್ತುಲ ರಸ್ತೆಯ ಏರ್‌ವೀವ್ ಜಂಕ್ಷನ್‌ನಲ್ಲಿ ಅಪಘಾತ ಸಂಭವಿಸಿದೆ.

    ನಗರದ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಧ್ಯಾನ್ ಶ್ಯಾಮ್, ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀದಿಸಲು ನಿರ್ಧರಿಸಿದ್ದ. ಭಾನುವಾರ ಮಧ್ಯಾಹ್ನ ಕೋರಮಂಲಗದ ಷೋರೂಮ್‌ನಲ್ಲಿ ಸ್ಕೂಟರ್ ಪಡೆದು ಟೆಸ್ಟ್ ಡ್ರೈವ್ ಮಾಡಲು ಬಂದಿದ್ದ. ಕೋರಮಂಗಲದ ಒಳವರ್ತುಲ ರಸ್ತೆಯಲ್ಲಿ ಹೋಗುವಾಗ ನಿಯಂತ್ರಣ ತಪ್ಪಿದ ದ್ವಿಚಕ್ರ ವಾಹನ, ರಸ್ತೆಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ.

    ಗುದ್ದಿದ ರಭಸಕ್ಕೆ ರಸ್ತೆಗೆ ಬಿದ್ದ ಧ್ಯಾನ್‌ಶ್ಯಾಮ್ ಗಂಭೀರವಾಗಿ ಗಾಯಗೊಂಡಿದ್ದ. ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪರೀಕ್ಷಿಸಿದ ವೈದ್ಯರು ಸವಾರ ತೀವ್ರ ರಕ್ತಸ್ರಾವವಾಗಿ ಮಾರ್ಗ ಮಧ್ಯೆಯೇ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಅತೀ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts