More

    ಬೆಂಗಳೂರಿನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಯುವತಿ ಶವ ಪತ್ತೆ

    ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಅಪರಾಧ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಇದೀಗ ಅನುಮಾನಸ್ಪದ ರೀತಿಯಲ್ಲಿ ಯುವತಿಯೊಬ್ಬಳ ಶವ ಪತ್ತೆಯಾಗಿರುವ ಘಟನೆ ಬೆಂಗಳೂರು ಹೊರವಲಯದ ಚಂದಾಪುರ ಸಮೀಪದ ಹೀಲಲಿಗೆ ಬಳಿಯಿರುವ ಬಿಸಿಇಟಿ ಇಂಜಿನಿಯರಿಂಗ್​ ಕಾಲೇಜಿನ ಹಾಸ್ಟೆಲ್​ನಲ್ಲಿ ನಡೆದಿದೆ.

    ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಹರ್ಷಿತಾ (18) ಮೃತದೇಹ ಪತ್ತೆಯಾಗಿದೆ. ಆಕೆಯನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ಹಾಸ್ಟೆಲ್ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು, ಸ್ಥಳಕ್ಕೆ ಭೇಟಿ ನೀಡಿದ ಸೂರ್ಯನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೃತದೇಹವನ್ನು ಮರಣೋತ್ತ ಪರೀಕ್ಷಗೆ ರವಾನಿಸಿದ್ದಾರೆ.

    ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಕರಡಿಹಳ್ಳಿ ಗ್ರಾಮದ ವಿದ್ಯಾರ್ಥಿನಿ ಹರ್ಷಿತ(18) ಬೆಂಗಳೂರು ಹೊರವಲಯ ಚಂದಾಪುರ ಸಮೀಪದ ಹೀಲಲಿಗೆಯಲ್ಲಿನ ಕಾಲೇಜ್ ಅಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿಯಲ್ಲಿ ಇಂಜಿನಿಯರಿಂಗ್​ ಓದುತ್ತಿದ್ದಳು. ಹರ್ಷಿತಾ ಕಾಲೇಜಿನ ವಸತಿ ನಿಲಯದಲ್ಲಿದ್ದು, ವಿದ್ಯಾಭ್ಯಾಸ ಮಾಡುತ್ತಿದ್ದಳು. ಆಕೆಯ ಸಾವು ಹಲವು ಅನುಮಾನಗಳಿಗೆ ಆಸ್ಪದ ಮಾಡಿಕೊಟ್ಟಿದ್ದು, ಮರಣೋತ್ತರ ಪರೀಕ್ಷೆಯ ನಂತರ ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂದು ತಿಳಿದು ಬರಲಿದೆ.

    Harshitha Engineering

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts