More

    ಸಾಲಕ್ಕೆ ಹೆದರಿ ಇಂಜಿನಿಯರಿಂಗ್​ ವಿದ್ಯಾರ್ಥಿ ಆತ್ಮಹತ್ಯೆ; ಅದಲ್ಲದೇ ಇತ್ತು ಬೇರೆ ಸಮಸ್ಯೆ..

    ಮಂಗಳೂರು: ಸಾಲಕ್ಕೆ ಹೆದರಿ ರೈತರು ಆತ್ಮಹತ್ಯೆ ಮಾಡಿಕೊಳ್ಳುವುದು ಸಾಮಾನ್ಯವಾಗಿ ಬಿಟ್ಟಿದೆ. ಈ ಮಧ್ಯೆ ವಿದ್ಯಾರ್ಥಿಯೊಬ್ಬ ಕೂಡ ಸಾಲದ ಬಾಧೆಯಿಂದಾಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮಂಗಳೂರಿನಲ್ಲಿ ಇಂಥದ್ದೊಂದು ಪ್ರಕರಣ ವರದಿಯಾಗಿದೆ.

    ಬಿಹಾರದ ಪಾಟ್ನಾ ಮೂಲದ ಸೌರವ್ ಕುಮಾರ್ ಯಾದವ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಮಂಗಳೂರು ಹೊರವಲಯದ ಎನ್​ಐಟಿಕೆ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಸೌರಭ್, ತನ್ನ ಕೋಣೆಯಲ್ಲೇ ನೇಣು ಬಿಗಿದುಕೊಂಡಿದ್ದಾನೆ.

    ಇದನ್ನೂ ಓದಿ: ಈ ಮೈ ಕೊರೆಯುವ ಚಳಿ ರಾಜ್ಯದಲ್ಲಿ ಇನ್ನೆಷ್ಟು ದಿನ?; ಇಲ್ಲಿದೆ ಹವಾಮಾನ ಮುನ್ಸೂಚನೆ..

    ಈತ ಡೆತ್​ನೋಟ್​ ಬರೆದಿಟ್ಟಿದ್ದರಿಂದ ಆತ್ಮಹತ್ಯೆಗೆ ಕಾರಣ ಏನು ಎಂಬುದು ತಿಳಿದು ಬಂದಿದೆ. ವಿದ್ಯಾಭ್ಯಾಸಕ್ಕಾಗಿ ಶೈಕ್ಷಣಿಕ ಸಾಲ ಪಡೆದಿದ್ದೆ ಹಾಗೂ ಅನಾರೋಗ್ಯದಿಂದ ಬಳಲುತ್ತಿದ್ದೇನೆ ಎಂಬುದಾಗಿ ಡೆತ್​ನೋಟ್​ನಲ್ಲಿ ಬರೆದಿದ್ದ. ಸ್ಥಳಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ನೀನೇ ಸಾಕಿದ ಗಿಣಿ ನಿನ್ನ ಹದ್ದಾಗಿ ಕುಕ್ಕಿತಲ್ಲೋ..; ಆರ್​ಟಿಐ ಕಾರ್ಯಕರ್ತನನ್ನೇ ಇಕ್ಕಟ್ಟಿಗೆ ಸಿಲುಕಿಸಿದ ಮಹಿಳಾ ಅಧಿಕಾರಿ!?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts