

ಕುಂದಾಪುರ: ಕುಂದಾಪುರ ತಾಲೂಕು ಬಂಟರ ಸಂಘದ ವತಿಯಿಂದ ಆರ್.ಎನ್.ಶೆಟ್ಟಿ ಸಭಾಂಗಣದಲ್ಲಿ ಸೋಮವಾರ ಇಂಜಿನಿಯರ್ಸ್ ಡೇ ಆಚರಿಸಲಾಯಿತು. ಕುಂದಾಪುರದ ಪುರಸಭಾ ಇಂಜಿನಿಯರ್ ಗುರುಪ್ರಸಾದ್ ಶೆಟ್ಟಿ ಶಿರೂರು ಅವರನ್ನು ಉದ್ಯಮಿ ನೆಲಗೊಂಡ ಸುಧಾಕರ ಶೆಟ್ಟಿ ಜನ್ಸಾಲೆ ಸನ್ಮಾನಿಸಿದರು.
ಕುಂದಾಪುರ ಯುವ ಬಂಟರ ಸಂಘದ ಅಧ್ಯಕ್ಷ ನಿತೀಶ್ ಶೆಟ್ಟಿ ಬಸ್ರೂರು ಅಧ್ಯಕ್ಷತೆ ವಹಿಸಿದ್ದರು. ಯುವ ಬಂಟರ ಸಂಘದ ದತ್ತಿನಿಧಿ ಪೋಷಕ ಕಂದಾವರ ಸತೀಶ್ ಶೆಟ್ಟಿ, ಅಶೋಕ್ ಶೆಟ್ಟಿ ಸಂಸಾಡಿ, ಬಿ.ಜಯರಾಮ ಶೆಟ್ಟಿ ಹಳ್ನಾಡು, ಬೈಂದೂರು ಬಂಟರ ಸಂಘದ ಮಾಜಿ ಅಧ್ಯಕ್ಷ ಶಶಿಧರ ಶೆಟ್ಟಿ ಸಾಲ್ಗದ್ದೆ, ಯುವ ಬಂಟರ ಸಂಘದ ಸ್ಥಾಪಕಾಧ್ಯಕ್ಷ ಡಾ.ಅಂಪಾರು ನಿತ್ಯಾನಂದ ಶೆಟ್ಟಿ, ಮುರಳೀಧರ ಶೆಟ್ಟಿ ಹುಯ್ಯರು, ಭರತ್ ರಾಜ್ ಶೆಟ್ಟಿ, ಸುನೀಲ್‌ಕುಮಾರ್ ಶೆಟ್ಟಿ, ಉದಯಕುಮಾರ್ ಶೆಟ್ಟಿ, ಪ್ರಶಾಂತ ಶೆಟ್ಟಿ, ಪ್ರದೀಪ್ ಶೆಟ್ಟಿ, ಸುರೇಶ ಶೆಟ್ಟಿ, ರಾಜೀವ ಶೆಟ್ಟಿ, ಸತೀಶ್ ಶೆಟ್ಟಿ, ಅರುಣ್‌ಕುಮಾರ್ ಶೆಟ್ಟಿ, ಸುಕುಮಾರ ಶೆಟ್ಟಿ, ರೋಶನ್ ಶೆಟ್ಟಿ ಉಪಸ್ಥಿತರಿದ್ದರು. ಡಾ.ಚೇತನ್ ಶೆಟ್ಟಿ ಕೋವಾಡಿ ವಂದಿಸಿದರು. ಸಚಿನ್ ಶೆಟ್ಟಿ ಹುಂಚನಿ ಕಾರ್ಯಕ್ರಮ ನಿರೂಪಿಸಿದರು.