More

    ಪ್ರಸ್ತುತ ಇಂಗ್ಲೀಷ್ ಕಲಿಕೆ ಅಗತ್ಯ: ರೋಟರಿ ಅಧ್ಯಕ್ಷೆ ಬಿ.ಎಸ್.ಅನುಪಮಾ ಅಭಿಮತ

    ಮಂಡ್ಯ: ಪ್ರಸ್ತುತ ಪ್ರತಿ ವಿದ್ಯಾರ್ಥಿಗೂ ಇಂಗ್ಲೀಷ್ ಕಲಿಕೆ ಅಗತ್ಯವಿದೆ ಎಂದು ರೋಟರಿ ಸಂಸ್ಥೆ ಅಧ್ಯಕ್ಷೆ ಬಿ.ಎಸ್.ಅನುಪಮಾ ಹೇಳಿದರು.
    ನಗರದ ಡಯಟ್ ಕಚೇರಿಯಲ್ಲಿ ರೋಟರಿ ಸಂಸ್ಥೆ ಮಂಡ್ಯ ಮತ್ತು ರೋಟರಿ ಗ್ಲೋಬಲ್ ಗ್ರ್ಯಾಂಟ್ ಪ್ರಾಜೆಕ್ಟ್, ಪ್ರಗತಿ ಹಾಗೂ ಪ್ರಥಮ್ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಿದ್ದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಂಗ್ಲೀಷ್ ಕಲಿಕಾ ಪುನರುತ್ಥಾನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
    ಸರ್ಕಾರಿ ಶಾಲೆ ವಿದ್ಯಾರ್ಥಿಗಳಲ್ಲಿ ಇಂಗ್ಲೀಷ್ ಕಲಿಕಾ ಸಾಮರ್ಥ್ಯ ಹೆಚ್ಚಿಸಲು ರೋಟರಿ ಅಂತಾರಾಷ್ಟ್ರೀಯ ಸಂಸ್ಥೆ ಸಂಕಲ್ಪಿಸಿದೆ. ಶಿಕ್ಷಕರ ಮೂಲಕ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಕಲಿಕಾ ಪುನರುತ್ಥಾನ ಶಿಬಿರಗಳನ್ನು 8 ವರ್ಷಗಳಿಂದ ಆಯೋಜಿಸಿಕೊಂಡು ಬರುತ್ತಿದೆ. ಗ್ರಾಮೀಣ ವಿದ್ಯಾರ್ಥಿಗಳಿಗೆ ಇಂಗ್ಲೀಷ್, ಗಣಿತ, ವಿಜ್ಞಾನ ಕಠಿಣ ಎನ್ನುವ ಮಾತುಗಳು ಕೇಳಿಬರುತ್ತಿವೆ. ಈ ಹಿನ್ನೆಲೆಯಲ್ಲಿ ಅವುಗಳನ್ನು ಸುಲಭಗೊಳಿಸುವ ವಿಧಾನಗಳನ್ನು ಸಂಪನ್ಮೂಲ ವ್ಯಕ್ತಿಗಳಿಂದ ಶಿಕ್ಷಕರಿಗೆ ನೀಡಿದರೆ ವಿದ್ಯಾರ್ಥಿಗಳಿಗೆ ತಲುಪುತ್ತದೆ ಎಂಬುದು ಆಶಯವಾಗಿದೆ ಎಂದು ತಿಳಿಸಿದರು.
    ಡಯಟ್‌ನ ಹಿರಿಯ ಉಪನ್ಯಾಸಕ ರಾಮು, ಸಂಪನ್ಮೂಲ ವ್ಯಕ್ತಿ ನಾಗರಾಜು ಉಪನ್ಯಾಸ ನೀಡಿದರು. ರೋಟರಿ ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷ ಎಸ್.ನಾರಾಯಣ್, ಪ್ರಥಮ್ ಸಂಸ್ಥೆಯ ಸಿಇಒ ಜಗದೀಶ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts